ಬೆಂಗಳೂರು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

John Prem
1 0
Read Time:2 Minute, 15 Second

ಬೆಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಶ್ರೀ ಕೋನ ವಂಶಿ ಕೃಷ್ಣ, ಐ.ಪಿ.ಎಸ್, ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ ಲಕ್ಷ್ಮೀ ಗಣೇಶ್, ಕೆ.ಎಸ್.ಪಿ.ಎಸ್, ಶ್ರೀ.ಹೆಚ್,ಎಸ್,ಜಗಧೀಶ್, ಪೊಲೀಸ್ ಉಪಾಧೀಕ್ಷಕರು, ನೆಲಮಂಗಲ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ನೆಲಮಂಗಲ ಟೌನ್ ಪೊಲೀಸ್ ಠಾಣೆಯ ಪಿ.ಐ ಶ್ರೀ. ಎ.ವಿ.ಕುಮಾರ್ ರವರ ನೇತೃತ್ವದಲ್ಲಿ ಪಿ.ಎಸ್.ಐ. ಹಾಗೂ ಸಿಬ್ಬಂದಿಯವರ ಖಚಿತ ಮಾಹಿತಿಯ ಮೇರೆಗೆ ಒಟ್ಟು 3 ಪ್ರಕರಣಗಳಲ್ಲಿ ಭೇದಿಸಿ 5 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಅವರಿಂದ ಸುಮಾರು 6 ಲಕ್ಷ ಬೆಲೆ ಬಾಳುವ 20 ಟೈರ್ ಮತ್ತು ಡಿಸ್ಕ್ ಗಳನ್ನು ಹಾಗೂ ರೂ.28,000/- ಬೆಲೆ ಬಾಳುವ 600 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿರುತ್ತಾರೆ. ಈ ಪತ್ತೆ ಕಾರ್ಯವನ್ನು ಹಿರಿಯ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.

ಬೆಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಶ್ರೀ ಕೋನ ವಂಶಿ ಕೃಷ್ಣ, ಐ.ಪಿ.ಎಸ್, ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ ಲಕ್ಷ್ಮೀ ಗಣೇಶ್, ಕೆ.ಎಸ್.ಪಿ.ಎಸ್, ಶ್ರೀ.ಹೆಚ್,ಎಸ್,ಜಗಧೀಶ್, ಪೊಲೀಸ್ ಉಪಾಧೀಕ್ಷಕರು, ನೆಲಮಂಗಲ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ನೆಲಮಂಗಲ (ಗ್ರಾ) ವೃತ್ತದ ಸಿ.ಪಿ.ಐ ಶ್ರೀ.ಹರೀಶ್ ರವರ ನೇತೃತ್ವದಲ್ಲಿ ಪಿ.ಎಸ್.ಐ. ಹಾಗೂ ಸಿಬ್ಬಂದಿಯವರುಗಳು ನೆಲಮಂಗಲ ಉಪವಿಭಾಗ ಹಾಗೂ ಇತರೆ ಠಾಣಾ ವ್ತಾಪ್ತಿಗಳಲ್ಲಿ ಬ್ಯಾಂಕ್ ನಿಂದ ಹಣವನ್ನು ಡ್ರಾ ಮಾಡಿಕೊಂಡು ಬರುತ್ತಿದ್ದ ಸಾರ್ವಜನಿಕರ ಗಮನವನ್ನು ಬೇರೆ ಕಡೆ ಸೆಳೆದು ಹಣವನ್ನು ಕಳ್ಳತನ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ಬಂಧಿಸಿ ಅವರಿಂದ ಸುಮಾರು ರೂ.15,20,000/- ನಗದು ಮತ್ತು 3 ಬೈಕ್ ಗಳನ್ನು ವಶಪಡಿಸಿಕೊಂಡಿರುತ್ತಾರೆ. ಈ ಪತ್ತೆ ಕಾರ್ಯವನ್ನು ಹಿರಿಯ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಜೆ .ಜಾನ್ ಪ್ರೇಮ್
Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ದಾವಣಗೆರೆ ಜಿಲ್ಲಾ ಪೊಲೀಸ್-ಕಾನ್ಸ್ಟೇಬಲ್ ಚೇತನ್ ಆರ್ ರವರ ಅಂತಿಮ ದರ್ಶನ

ಆಕಸ್ಮಿಕ ಫೈರಿಂಗ್‌ನಿಂದ ಗುಂಡು ತಗುಲಿ ಸಶಸ್ತ್ರ ಮೀಸಲು ಪಡೆಯ ಕಾನ್‌ಸ್ಟೇಬಲ್ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಸೋಮವಾರ ಬೆಳಗ್ಗೆ ಅವಘಡ ಸಂಭವಿಸಿದೆ. ಚೇತನ್ (28) ಸಾವನ್ನಪ್ಪಿದ ಪೊಲೀಸ್ ಕಾನ್‌ಸ್ಟೇಬಲ್. ಬೆಳಗ್ಗೆಯ ತರಬೇತಿ ಮುಗಿಸಿ ಆಯುಧ ಸ್ವಚ್ಛ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಫೈರಿಂಗ್‌ ಆಗಿ ಗುಂಡು ತಗುಲಿದೆ. ಘಟನೆ ಬಳಿಕ ತುರ್ತಾಗಿ ದಾವಣಗೆರೆಯ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ಚೇತನ್‌ ಅವರನ್ನು ಸಾಗಿಸಲಾಯಿತು. ಆದರೆ, ಆಸ್ಪತ್ರೆಗೆ […]

Get News on Whatsapp

by send "Subscribe" to 7200024452
Close Bitnami banner
Bitnami