ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಇಂದು ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸಿ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಲಾಯಿತು. ಮುಖ್ಯ ಅತಿಥಿಗಳಾಗಿ ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ, ಮಾನ್ಯ ಪೊಲೀಸ್ ಆಯುಕ್ತರು, ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಇತರ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
ಪ್ರತಿ ವರ್ಷ ಅಕ್ಟೋಬರ್ 21ರಂದು ಆಚರಿಸಲಾಗುವ ಪೊಲೀಸ್ ಹುತಾತ್ಮರ ದಿನವನ್ನು ಇಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಐಪಿಎಸ್ರವರು ಪ್ರಾಸ್ತಾವಿಕ ಭಾಷಣ ಮಾಡಿ 2020-21ನೇ ಸಾಲಿನಲ್ಲಿ ಕರ್ತವ್ಯದ ಸಮಯದಲ್ಲಿ ಹುತಾತ್ಮರಾದ ದೇಶದ ಎಲ್ಲಾ ರಾಜ್ಯಗಳ ಮತ್ತು ಇತರೆ ಕೇಂದ್ರೀಯ ಪೊಲೀಸ್ ಪಡೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳ ಹೆಸರುಗಳನ್ನು ಓದುವ ಮೂಲಕ ಸ್ಮರಿಸಿದರು. ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಪ್ರಧಾನ ಮತ್ತು […]