ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ಚೇತನ್.ಆರ್.ಐಪಿಎಸ್ ರವರಿಂದು ಹುಣಸೂರು ಪಟ್ಟಣ ಪೊಲೀಸ್ ಠಾಣಾ ಪರಿವೀಕ್ಷಣೆ ನಡೆಸಿದರು. ಇದೇ ವೇಳೆ ಠಾಣಾ ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸಿ, ನೂತನ ಗಸ್ತು ಪದ್ದತಿಯನ್ನು ಪರಿಣಾಮಕಾರಿಯಾಗಿ ಬಳಸಿ ಅಪರಾಧ ತಡೆ ಮತ್ತು ಅಪರಾಧಿಗಳ ಪತ್ತೆ ಬಗ್ಗೆ ಹೆಚ್ಚಿನ ರೀತಿಯಲ್ಲಿ ತೊಡಗಿಸಿಕೊಳ್ಳಲು ಸೂಚಿಸಿದರು.
ಕರ್ನಾಟಕ ಸರ್ಕಾರವು ಕನ್ನಡ ರಾಜ್ಯೋತ್ಸವದ ಅಂಗವಾಗಿ “ಕನ್ನಡಕ್ಕಾಗಿ ನಾವು ” ಎಂಬ ವಿಶೇಷ ಅಭಿಯಾನವನ್ನು ಆಯೋಜಿಸಿದ್ದು, ದಿನಾಂಕ: 28.10.2021ರಂದು ಬೆಳಗ್ಗೆ 11.00 ಗಂಟೆಗೆ ರಾಜ್ಯಾದ್ಯಂತ ಲಕ್ಷ ಕಂಠಗಳ ಕನ್ನಡ ಗೀತ ಗಾಯನ ಕಾರ್ಯಕ್ರಮವನ್ನು ನಡೆಸಲು ಆದೇಶಿಸಿದ್ದು ಇದರಂತೆ ಮೈಸೂರು ನಗರ ಪೊಲೀಸ್ ಆಯುಕ್ತರ ಕಛೇರಿಯಲ್ಲಿ ಪೊಲೀಸ್ ಆಯುಕ್ತ ರಾದ ಡಾ: ಚಂದ್ರಗುಪ್ತ ಐ.ಪಿ.ಎಸ್. ರವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.