Read Time:1 Minute, 1 Second
ಬೆಂಗಳೂರು:ಗೋವಿಂದರಾಜನಗರ ಪೊಲೀಸ್ ಠಾಣಾ ಸರಹದ್ದಿಗೆ ಸೇರಿದ ಮನೆಯೊಂದರಲ್ಲಿ
ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಮಾಹಿತಿ ಸಂಗ್ರಹಿಸಿ ಗೋವಿಂದರಾಜನಗರ ಪೊಲೀಸರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ದಾಳಿ ಮಾಡಿ, ವೇಶ್ಯಾವಾಟಿಕೆ ನಡೆಸುತ್ತಿದ್ದ ಓರ್ವ ಮಹಿಳೆ ಮತ್ತು ಒಬ್ಬ ಪುರುಷ ಆರೋಪಿಯನ್ನು ದಸ್ತಗಿರಿ ಮಾಡಲಾಗಿರುತ್ತದೆ. ಆರೋಪಿಗಳಿಂದ ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಎರಡು ಮೊಬೈಲ್ ಫೋನ್‌ಗಳು, ರೂ.2.500/- ನಗದು ಹಣವನ್ನು ಅಮಾನತ್ತುಪಡಿಸಿಕೊಂಡು, ವೇಶ್ಯಾವಾಟಿಕೆಗೆ ದೂಡಿದ್ದ ನಾಲ್ಕು ಜನ ನೊಂದ ಮಹಿಳೆಯರನ್ನು ಸಂರಕ್ಷಿಸಿರುತ್ತಾರೆ.
ಈ ಕಾರ್ಯಾಚರಣೆಯನ್ನು ಡಿಸಿಪಿ, ಪಶ್ಚಿಮ ವಿಭಾಗ ಮತ್ತು ಪೊಲೀಸ್ ಇಲಾಖೆಯ
ಹಿರಿಯ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.
