ದ್ವಿ-ಚಕ್ರ ವಾಹನ ಮತ್ತು ಮೊಬೈಲ್‌ ಫೋನ್‌ ಕಳ್ಳತನ ಮಾಡಿದ ಆರೋಪಿಯ ಬಂಧನ : ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸರ ಕಾರ್ಯಚರಣಿ

0 0
Read Time:1 Minute, 35 Second

ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸ್‌ರು, ಮೋಜು ಮತ್ತು ಮಸ್ತಿಗಾಗಿ, ದ್ವಿ-ಚಕ್ರ ವಾಹನ ಮತ್ತು ಮೊಬೈಲ್ ಫೋನ್‌ಗಳನ್ನು ಕಳ್ಳತನ ಮಾಡುತ್ತಿದ್ದ ತಮಿಳುನಾಡು ಮೂಲದ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ ಅವರ ವಶದಿಂದ ಸುಮಾರು 8 ಲಕ್ಷ ಮೌಲ್ಯದ 10 ಐಷಾರಾಮಿ ದ್ವಿ-ಚಕ್ರ ವಾಹನ ಮತ್ತು 1 ಆಟೋ ರಿಕ್ಷಾ ಹಾಗೂ 1 ಲಕ್ಷದ 20 ಸಾವಿರ ರೂ ಮೌಲ್ಯದ 19 ವಿವಿಧ ಕಂಪನಿಯ ಮೊಬೈಲ್ ಫೋನ್‌ಗಳನ್ನು ಅಮಾನತ್ತುಪಡಿಸಿಕೊಂಡಿರುತ್ತಾರೆ.

ಬೆಂಗಳೂರು ನಗರ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ. ಕೃಷ್ಣಕಾಂತ ರವರ ಮಾರ್ಗದರ್ಶನದಲ್ಲಿ ವಿ. ವಿ .ಪುರಂ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ನಾಗರಾಜ,ಟಿ ಅವರ ಉಸ್ತುವಾರಿಯಲ್ಲಿ, ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ.ಮಿರ್ಜಾ ಅಲಿ ರಜಾ ಅವರ ನೇತೃತ್ವದಲ್ಲಿ ಹಾಗು ಸಿಬ್ಬಂದಿಯವರು ಈ ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಉತ್ತಮ ಕಾರ್ಯವನ್ನು ಮಾನ್ಯ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ದಯಾನಂದ ರವರು ಮತ್ತು ಮಾನ್ಯ ಪಶ್ಚಿಮ ವಿಭಾಗದ ಅಪರ ಪೊಲೀಸ್ ಆಯುಕ್ತರಾದ ಶ್ರೀ
ಸತೀಶ್ ಕುಮಾರ್ , ಐ.ಪಿ.ಎಸ್, ರವರು ಶ್ಲಾಘಿಸಿರುತ್ತಾರೆ.

ವರದಿ : ಆಂಟೋನಿ ಬೇಗೂರು

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಒಬ್ಬ ಆರೋಪಿಯ ಬಂಧನ : ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸರ ಕಾರ್ಯಚರಣೆ,

ವಿ .ವಿ.ಪುರಂ ಪೊಲೀಸ್ ಠಾಣೆಯ ಪೊಲೀಸ್‌ರು ರಾಜಸ್ಥಾನದಿಂದ ಕೊಲಿಯ‌ ಮುಖಾಂತರ ಮಾದಕ ವಸ್ತುವಾದ ಓಪಿಎಂ ಪಟ್ಟಿಯನ್ನು ಕಡಿಮೆ ಬೆಲೆಗೆ ತರಿಸಿಕೊಂಡು ಇದನ್ನು ಮನೆಯಲ್ಲಿ ಮಿಕ್ಸ್‌‌ ಗ್ರೈಂಡರ್ ಮೂಲಕ ಪುಡಿಮಾಡಿ ರಾತ್ರಿ ಪೂರಾ ನೀರಿನಲ್ಲಿ ನೆನೆಸಿಟ್ಟು ನಂತರ ಅದರ ನೀರನ್ನು ಪಾರ್ಟಿ ಮತ್ತು ಇತರೆ ಮೋಜು-ಮಸ್ತಿಯ ಕೂಟಗಳಲ್ಲಿ ಬರುವ ಕಾಲೇಜು ವಿದ್ಯಾರ್ಥಿಗಳು, ಸಾಫ್ಟ್ ವೇರ್ ಇಂಜಿನಿಯರುಗಳಿಗೆ ನೀಡುತ್ತಿರುತ್ತಾರೆ ಹಾಗೂ ಪುಡಿಯನ್ನು ಸಹ ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ರಾಜಸ್ಥಾನ ಮೂಲದ ಒಬ್ಬ ವ್ಯಕ್ತಿಯನ್ನು […]

Get News on Whatsapp

by send "Subscribe" to 7200024452
Close Bitnami banner
Bitnami