ಕನಕಪುರ ಗ್ರಾಮಾಂತರ ಪೊಲೀಸರು ಯಶಸ್ವಿ ಕಾರ್ಯಾಚರಣೆ . ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಕನಕಪುರ ಗ್ರಾಮಾಂತರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದರು.
ಬಂಧಿತರಿಂದ 90 ಗ್ರಾಂ ಚಿನ್ನಾಭರಣ ಮತ್ತು 2ದ್ವಿಚಕ್ರ ವಾಹನ ಗಳನ್ನು ವಶಕ್ಕೆ ಪಡೆದು ಒಟ್ಟು 3ಪ್ರಕರಣಗಳನ್ನು ಪತ್ತೆ ಮಾಡಲಾಗಿರುತ್ತದೆ
ಕರ್ತವ್ಯ ನಿರ್ವಹಣೆಯಲ್ಲಿ ಕರ್ನಾಟಕ ಪೊಲೀಸರು ದಕ್ಷತೆ, ಪ್ರಾಮಾಣಿಕತೆ ಸಾಬೀತು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. 2019ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಿ ಮಾತನಾಡಿದ ಅವರು, ಕರ್ತವ್ಯ ನಿಷ್ಠೆ, ಉಗ್ರಗಾಮಿ ಹಾಗೂ ನಕ್ಸಲ್ ಚಟುವಟಿಕೆಗಳ ನಿಗ್ರಹ, ಕಾನೂನು ಮತ್ತು ಸುವ್ಯವಸ್ಥೆ, ಗುಪ್ತವಾರ್ತೆ, ಸಂಗ್ರಹ, ರಸ್ತೆ ಸಂಚಾರ, ಸುರಕ್ಷತೆಯಲ್ಲಿ ಅಸಾಧಾರಣ ಸಾಮರ್ಥ್ಯ ತೋರಿದವರಿಗೆ ಪ್ರೋತ್ಸಾಹಿಸಲಾಗುತ್ತಿದೆ ಎಂದರು. ಪೊಲೀಸ್ ಇಲಾಖೆಯ ಮೂಲ ಸೌಕರ್ಯಗಳ ಉನ್ನತೀಕರಣ ಹಾಗೂ ಕರ್ತವ್ಯ ನಿರ್ವಹಣೆಗೆ ಆಧುನಿಕ […]