ಕೊಡಗು ಜಿಲ್ಲೆ ವಿರಾಜಪೇಟೆ ತಾಲೊಕು ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕರಡಿಗೋಡು ಗ್ರಾಮದ ಇವಾಲ್ ಬ್ಯಾಕ್ ರೆಸಾರ್ಟ್ ನಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಮಡಿಕೇರಿ ನಗರ ಪೊಲೀಸ್ ವೃತ್ತ ನಿರೀಕ್ಷಕರು, ಸಿದ್ದಾಪುರ ಪೊಲೀಸ್ ಠಾಣಾ ಪಿಎಸ್ಐ ಮತ್ತು ಸಿಬ್ಬಂದಿಯವರು ಹಾಗೂ ಕೊಡಗು ಡಿ.ಸಿ.ಆರ್.ಬಿ ಘಟಕದ ಸಿಬ್ಬಂದಿಯವರ ತಂಡ ಯಶಸ್ವಿಯಾಗಿದ್ದಾರೆ. ದಿನಾಂಕ 01-04-2022 ರಂದು ಮುಂಬೈನಿಂದ ಬಾಲಕೃಷ್ಣ ಭಂಡಾರಿ ಮತ್ತು ಅವರ ಸಂಸಾರದವರು ಸಿದ್ದಾಪುರದ ಕರಡಿಗೋಡಿನ ಇವಾಲ್ ಬ್ಯಾಕ್ […]
Kodagu District Police
ಕಳವು ಪ್ರಕರಣ ಪತ್ತೆ, ಆರೋಪಿಗಳ ಬಂಧನ ಕೊಡಗು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ದಿನಾಂಕ:05/08/2021 ರಂದು ಗೋಣಿಕೊಪ್ಪ ಠಾಣಾ ವ್ಯಾಪ್ತಿಯ ಅತ್ತೂರು ಗ್ರಾಮದ ಕೆ.ಎಸ್.ಮಾಚಯ್ಯರವರ ಮನೆಯಲ್ಲಿ ಹಾಡುಹಗಲೇ ಕಳ್ಳತನ ಮಾಡಿದ್ದ ಆರೋಪಿತರನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಗೋಣಿಕೊಪ್ಪ ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಸಿಬ್ಬಂದಿಯವರು ಯಶಸ್ವಿಯಾಗಿರುತ್ತಾರೆ. ಅತ್ತೂರು ಗ್ರಾಮದ ನಿವಾಸಿ ಕೆ.ಎಸ್.ಮಾಚಯ್ಯ ರವರು ದಿನಾಂಕ:05/08/2021 ರಂದು ಬೆಳಿಗ್ಗೆ 09.00 ಗಂಟೆಗೆ ಮನೆಗೆ ಬೀಗಹಾಕಿಕೊಂಡು ಅಮ್ಮತ್ತಿಯಲ್ಲಿರುವ ತಮ್ಮ ಕಾಫಿ ತೋಟಕ್ಕೆ ಹೋಗಿದ್ದು, ಸಂಜೆ ಮನೆಗೆ ವಾಪಾಸ್ಸು ಬಂದು ನೋಡುವಾಗ್ಗೆ ಮನೆಯ ಹೆಂಚನ್ನು ತೆಗೆದು ಯಾರೋ ಕಳ್ಳರು ಒಳನುಗ್ಗಿ […]
ಕೊಡಗು ಜಿಲ್ಲೆ ಸಿದ್ದಾಪುರ ಪೊಲೀಸ್ ಠಾಣೆ ಅವರಿಂದ ಯಶಸ್ವಿ ಕಾರ್ಯಾಚರಣೆ
ಕೊಡಗು ಜಿಲ್ಲೆ ವಿರಾಜಪೇಟೆ ತಾಲೋಕು ಸಿದ್ದಾಪುರ ಚೆನ್ನಯ್ಯನಕೋಟೆ ಹೊಳಮಾಳ ಗ್ರಾಮದಲ್ಲಿ ವಾಮಾಚಾರ ನಡೆಸಿ ನಿಧಿ ಶೋಧನೆ ನಡೆಸುತ್ತಿದ್ದ ವ್ಯಕ್ತಿಗಳಿಬ್ಬರನ್ನು ಪತ್ತೆಹಚ್ಚುವಲ್ಲಿ ಕೊಡಗು ಜಿಲ್ಲಾ ಡಿಸಿಐಬಿ ಹಾಗೂ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿರುತ್ತಾರೆ. ದಿನಾಂಕ 08-01-2022ರಂದು ಖಚಿತ ಮಾಹಿತಿ ಮೇರೆ ಸಿದ್ದಾಪುರ ಚೆನ್ನಯ್ಯನಕೋಟೆ ಹೊಳಮಾಳ ಗ್ರಾಮದ ಕೋಟೆ ಪೈಸಾರಿಯ ಎಂ.ಆರ್ ಗಣೇಶ್ ಎಂಬವರ ಮನೆಗೆ ದಾಳಿ ನಡೆಸಿದ ಡಿಸಿಐಬಿ ಹಾಗೂ ಸಿದ್ದಾಪುರ ಪೊಲೀಸರು ವಾಮಾಚಾರ ನಡೆಸಿ ನಿಧಿ ಶೋಧನೆಯಲ್ಲಿ ತೊಡಗಿದ್ದ ಎಂ.ಆರ್ ಗಣೇಶ್ […]
ಕೊಡಗು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬಿಳಿಗೇರಿ ಗ್ರಾಮದ ಕಿರುಹೊಳೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯನ್ನು ಪತ್ತೆಹಚ್ಚುವಲ್ಲಿ ಡಿಸಿಐಬಿ ಮತ್ತು ಮಡಿಕೇರಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ದಿನಾಂಕ 4-2-2021 ರಂದು ದೊರೆತ ಮಾಹಿತಿ ಮೇರೆಗೆ ಡಿಸಿಐಬಿ ಮತ್ತು ಮಡಿಕೇರಿ ಗ್ರಾಮಾಂತರ ಪೊಲೀಸರು ಬಿಳಿಗೇರಿ ಗ್ರಾಮದ ಕಿರುಹೊಳೆಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆಯನ್ನು ಪತ್ತೆಹಚ್ಚಿ ಮರಳು ತುಂಬಿದ ಒಂದು ಮಿನಿ ಟಿಪ್ಪರ್, ಹೊಳೆಯ ದಡದಲ್ಲಿ ಸಂಗ್ರಹಿಟ್ಟಿದ್ದ 2 ಲೋಡಿನಷ್ಟು ಮರಳು ಮತ್ತು ಒಂದು ಕಬ್ಬಿಣದ ತೆಪ್ಪವನ್ನು ವಶಕ್ಕೆ ಪಡೆದು […]
ನಾಪೋಕ್ಲು ಪೊಲೀಸರ ಕಾರ್ಯಾಚರಣೆ. ನಕಲಿ ಚಿನ್ನ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ.
ಜಿಲ್ಲೆಯ ನಾಪೋಕ್ಲು ನಗರದ ನಂದಿ ಚಿನ್ನದಂಗಡಿಗೆ ಮೂವರು ವ್ಯಕ್ತಿಗಳು ಬಂದು ನಕಲಿ ಚಿನ್ನವನ್ನು ಗಿರವಿ ಇಟ್ಟು ಮುಂಗಡವಾಗಿ 20,000/- ಹಣವನ್ನು ಪಡೆದುಕೊಂಡಿದ್ದು,ಅನುಮಾನಗೊಂಡ ಅಂಗಡಿ ಮಾಲೀಕ ಪರೀಕ್ಷಿಸಿದಾಗ 22 ಕ್ಯಾರೆಟ್ ಚಿನ್ನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ತಾಮ್ರವನ್ನು ಸೇರಿಸಿರುವುದು ಕಂಡು ಬಂದಿದ್ದು, ಅದೇ ವೇಳೆಗೆ ಮೂವರು ಆರೋಪಿಗಳು ಅಂಗಡಿಯಿಂದ ಪರಾರಿಯಾಗಿದ್ದು ಈ ಸಂಬಂಧ ಅಂಗಡಿ ಮಾಲೀಕರು ನಾಪೋಕ್ಲು ಠಾಣೆಗೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದರು. ಹಿರಿಯ ಪೊಲೀಸ್ […]
ಕೊಡಗು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ ಕಳ್ಳತನ ಪ್ರಕರಣಗಳನ್ನು ಪತ್ತೆ
ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಬಸವೇಶ್ವರ ಬಡಾವಣೆ ಹಾಗೂ ಕಾವೇರಿ ಬಡಾವಣೆ ಯಲ್ಲಿ ನಡೆದ ಎರಡು ಮನೆ ಕಳ್ಳತನ ಹಾಗೂ ದಂಡಿನಪೇಟೆಯಲ್ಲಿ ನಡೆದ ಒಂದು ವಾಹನ ಕಳವು ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಕುಶಾಲನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಸದರಿ ಕಳ್ಳತನ ಪ್ರಕರಣಗಳ ಪತ್ತೆಗಾಗಿ ಕುಶಾಲನಗರ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ, ದಿನಾಂಕ 10-11-2021 ರಂದು ರಾತ್ರಿ ಗಸ್ತಿನಲ್ಲಿದ್ದ ಎಎಸ್ಐ ಶ್ರೀ ಮಂಜುನಾಥ ಹಾಗು ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ […]
ಪೊಲೀಸ್ ಹುತಾತ್ಮರ ದಿನಾಚರಣೆ -ಕೊಡಗು ಜಿಲ್ಲಾ ಪೊಲೀಸ್
ಪ್ರತಿ ವರ್ಷ ಅಕ್ಟೋಬರ್ 21ರಂದು ಆಚರಿಸಲಾಗುವ ಪೊಲೀಸ್ ಹುತಾತ್ಮರ ದಿನವನ್ನು ಇಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಐಪಿಎಸ್ರವರು ಪ್ರಾಸ್ತಾವಿಕ ಭಾಷಣ ಮಾಡಿ 2020-21ನೇ ಸಾಲಿನಲ್ಲಿ ಕರ್ತವ್ಯದ ಸಮಯದಲ್ಲಿ ಹುತಾತ್ಮರಾದ ದೇಶದ ಎಲ್ಲಾ ರಾಜ್ಯಗಳ ಮತ್ತು ಇತರೆ ಕೇಂದ್ರೀಯ ಪೊಲೀಸ್ ಪಡೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳ ಹೆಸರುಗಳನ್ನು ಓದುವ ಮೂಲಕ ಸ್ಮರಿಸಿದರು. ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಪ್ರಧಾನ ಮತ್ತು […]
ನಕಲಿ ನೇಮಕಾತಿ ಆದೇಶ ನೀಡಿ ವಂಚಿಸಿದ ವ್ಯಕ್ತಿಗಳ ಬಂಧನ
ಕೊಡಗು ಜಿಲ್ಲೆ ಹಾಗೂ ಹೊರ ಜಿಲ್ಲೆಯ ವ್ಯಕ್ತಿಗಳಿಗೆ ವಿವಿಧ ಇಲಾಖೆಗಳಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿ ನಕಲಿ ನೇಮಕಾತಿ ಆದೇಶ ನೀಡಿ ಕೋಟ್ಯಾಂತರ ರೂಪಾಯಿ ಹಣ ವಂಚಿಸಿದ ಕುಖ್ಯಾತ ವ್ಯಕ್ತಿಯೊಬ್ಬನನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೊಡಗು ಜಿಲ್ಲೆಯ ಡಿಸಿಐಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಉಪ ನಿರೀಕ್ಷಕ ಹುದ್ದೆ ಕೊಡಿಸುವುದಾಗಿ ನಕಲಿ ನೇಮಕಾತಿ ಆದೇಶ ನೀಡಿ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಮಡಿಕೇರಿ ನಗರದ ನಿವಾಸಿಯೊಬ್ಬರು ಮಡಿಕೇರಿ ನಗರ ಪೊಲೀಸ್ ಠಾಣೆಗೆ […]
ಅಕ್ರಮ ಗಾಂಜಾ ಪ್ರಕರಣ:ಪೊನ್ನಂಪೇಟೆ ಪೊಲೀಸರಿಂದ ಕಾರ್ಯಾಚರಣೆ
ಪೊನ್ನಂಪೇಟೆ ಠಾಣಾ ವ್ಯಾಪ್ತಿಯ ಹಳ್ಳಿಗಟ್ಟು ಗ್ರಾಮದ ದೇವ ಕಾಲೋನಿಯಲ್ಲಿ ಹೆಚ್.ಜಿ.ಮೋಹನ್ ಎಂಬುವವರು ಮನೆಯ ಆವರಣದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವುದನ್ನು ಪತ್ತೆ ಹಚ್ಚಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಿನಾಂಕ: 22/09/2021 ರಂದು ಹಳ್ಳಿಗಟ್ಟು ಗ್ರಾಮದ ದೇವ ಕಾಲೋನಿಯ ನಿವಾಸಿಯಾದ ಮೋಹನ್ ಎಂಬುವವರು ತನ್ನ ಮನೆಯ ಆವರಣದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವುದಾಗಿ ಗೋಣಿಕೊಪ್ಪ ವೃತ್ತ ಸಿ.ಪಿ.ಐ ಎಸ್.ಎನ್.ಜಯರಾಮ್ ರವರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಆರೋಪಿ […]
ಕೋವಿಡ್-19 ಚೆಕ್ ಪೋಸ್ಟ್ ಗಳಿಗೆ ದಕ್ಚಿಣ ವಲಯದ ಐ.ಜಿ.ಪಿ. ಭೇಟಿ
ಕೊಡಗು-ಕೇರಳ ಗಡಿ ಪ್ರದೇಶದ ಮಾಕುಟ್ಟ ಹಾಗೂ ಕುಟ್ಟ ಕೋವಿಡ್-19 ಚೆಕ್ ಪೋಸ್ಟ್ ಗಳಿಗೆ ಮಾನ್ಯ ಶ್ರೀ ಪ್ರವೀಣ್ ಮಧುಕರ್ ಪವಾರ್, ಐಪಿಎಸ್, ಪೊಲೀಸ್ ಮಹಾ ನಿರೀಕ್ಷಕರು, ದಕ್ಷಿಣ ವಲಯ ಮೈಸೂರುರವರು ಭೇಟಿ ನೀಡಿ ಪರಿಶೀಲನೆ ನಡೆಸಿ ಕರ್ತವ್ಯದಲ್ಲಿದ್ದ ಅಧಿಕಾರಿಗಳಿಂದ ತಪಾಸಣಾ ಕಾರ್ಯದ ಬಗ್ಗೆ ಮಾಹಿತಿ ಪಡೆದರು. ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಹರಡದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಪ್ರಮುಖ ಕೊಡಗು-ಕೇರಳ ಗಡಿಪ್ರದೇಶಗಳಾದ […]