ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರಾದ ಡಾ || ವಿಕ್ರಮ್ ಅಮಟೆ ಐ.ಪಿ.ಎಸ್ ರವರು ದಿನಾಂಕ 19.03.2023 ರಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ಬ್ರಿಫಿಂಗ್ ಸಭೆ ನಡೆಸಿ, ಸಿಬ್ಬಂದಿಗಳ ಕುಂದುಕೊರತೆಗಳನ್ನು ವಿಚಾರಿಸಿ, ಮುಂಬರುವ ಚುನಾವಣೆಗೆ ಸಂಬಂದಿಸಿದ ಕಾನೂನುಗಳ ಬಗ್ಗೆ ಮಾಹಿತಿ ನೀಡಿ, ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುವ ಬಗ್ಗೆ ಮಾರ್ಗದರ್ಶನ ನೀಡಿರುತ್ತಾರೆ. ಸದರಿ […]
Dakshina Kannada
ಕೊಲೆ ಪ್ರಕರಣ ಭೇದಿಸಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು
ದಿನಾಂಕ 04-06-2022 ರಂದು 17-30 ಗಂಟೆಗೆ ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪ್ಪಾಡಿ ಎಂಬಲ್ಲಿ ಚರಣ್ ರಾಜ್ ಎಂಬವರನ್ನು ಕಿಶೋರ್ ಪುಜಾರಿ ಮತ್ತು ಇತರರ ತಂಡ ತಲವಾರು ಮತ್ತು ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದು ಈ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 49/2022 ಕಲಂ 302 ಜೊತೆಗೆ 34 ಐ ಪಿ ಸಿ ಯಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು. ಇದೊಂದು ಪೂರ್ವದ್ವೇಷದಿಂದ ಮಾಡಿರುವ ಕೊಲೆಯಾಗಿರುತ್ತದೆ. […]
ಬಂಟ್ವಾಳ ನಗರ ಠಾಣಾ ಪೊಲೀಸರಿಂದ ಬೈಕ್ ಕಳ್ಳತನದ ಆರೋಪಿಗಳ ಬಂಧನ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 27.04.2022 ರಂದು ರಾತ್ರಿ ಬಂಟ್ವಾಳ ಮಣಿಹಳ್ಳ ಎಂಬಲ್ಲಿ ನಡೆದ ಸುಮಾರು 1 ಲಕ್ಷ ಮೌಲ್ಯದ ಮೋಟಾರ್ ಸೈಕಲ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ 1) ಸಿದ್ದಿಕ್ @ ಅಬೂಬ್ಬಕ್ಕರ್ ಸಿದ್ದಿಕ್, ಪ್ರಾಯ 27 ವರ್ಷ ತಂದೆ: ಹಮೀದ್, ವಾಸ : ಸಬರಬೈಲು ಮನೆ, ಕುವೆಟ್ಟು ಗ್ರಾಮ, ಬೆಳ್ತಂಗಡಿ ತಾಲೂಕು. 2) ಅಕ್ಬರ್, ಪ್ರಾಯ 32 ವರ್ಷ, ತಂದೆ: […]
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಮಂಗಳೂರು ನಗರ ಪೊಲೀಸ್ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ದ್ವಜ ಹಾಗೂ ಕಲ್ಯಾಣ ದಿನಾಚರಣೆ
ಕರ್ನಾಟಕ ರಾಜ್ಯ ಪೊಲೀಸ್ ದ್ವಜ ಹಾಗೂ ಕಲ್ಯಾಣ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಮಂಗಳೂರು ನಗರ ಪೊಲೀಸ್ ವತಿಯಿಂದ ದಿನಾಂಕ 02.04.2022 ರಂದು ಮಂಗಳೂರಿನ ಪೊಲೀಸ್ ಕವಾಯತು ಮೈದಾನದಲ್ಲಿ ಪಥಸಂಚಲನ ನಡೆಯಿತು. ನಿವೃತ್ತ ಪೊಲೀಸ್ ಅಧೀಕ್ಷಕರಾದ ಶ್ರೀ .ವಿನಯ್ ಎ ಗಾಂವಕರ್ ರವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಗೌರವ ವಂದನೆ ಸ್ವೀಕರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ಶ್ರೀ. ದೇವಜ್ಯೋತಿ ರೇ […]
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ ಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ
ಶಾಲಾ-ಕಾಲೇಜ್ ಗಳ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಋಷಿಕೇಶ್ ಭಗವಾನ್ ಸೋನವಣೆ ಐ.ಪಿ.ಎಸ್ ರವರು ದಿನಾಂಕ 29.01.2022 ರಂದು ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿಗೆ ಅಧಿಕಾರಿಗಳು ಹಾಗೂ ಇತರ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಭೇಟಿ ನೀಡಿ ವಿಧ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ERSS-112 ತುರ್ತು ಸೇವೆಗಳು, ಬಾಲಾಪರಾಧ, ಪೊಕ್ಸೋ ಪ್ರಕರಣ, ಬಾಲಾಪರಾಧಿ ನ್ಯಾಯಾಲಯ, ಸೈಬರ್ ಅಪರಾಧಗಳು ಸೇರಿದಂತೆ ಕಾನೂನಿನ ಹಲವು ವಿಷಯಗಳ […]
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿ ಕಾರ್ಯಾಚರಣೆ ಮನೆ ಕಳ್ಳತನ ಅಪರಾಧಿಗಳ ಬಂಧನ
ದಿನಾಂಕ : 31-10-2021 ರಂದು ಮಹಮ್ಮದ್, ವಾಸ : ದೇರಾಜೆ ಮನೆ , ಇಂದಬೆಟ್ಟು ಗ್ರಾಮ , ಬೆಳ್ತಂಗಡಿ ತಾಲೂಕು ಎಂಬವರ ಮನೆಯಲ್ಲಿ ಯಾರೂ ಇಲ್ಲದ ಸಮಯ ಯಾರೋ ಕಳ್ಳರು ಮನೆಗೆ ನುಗ್ಗಿ ಮನೆಯ ಗೋದ್ರೇಜ್ ನಲ್ಲಿಟ್ಟಿದ್ದ ಸುಮಾರು 12,05,200 ರೂಪಾಯಿ ಮೌಲ್ಯದ ವಿವಿಧ ರೀತಿಯ 40 ಪವನ್ ಚಿನ್ನಾಭರಣಗಳು ಮತ್ತು ನಗದು ಹಣ 5200 ರೂಪಾಯಿ ಕಳವುಗೈದಿದ್ದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 95/2021 ಕಲಂ […]
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವಾರ್ಷಿಕ ಪೊಲೀಸ್ ಕ್ರೀಡಾಕೂಟ
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವಾರ್ಷಿಕ ಪೊಲೀಸ್ ಕ್ರೀಡಾಕೂಟವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಬಿ.ಎಂ ಲಕ್ಷ್ಮೀ ಪ್ರಸಾದ್ ಐ.ಪಿ.ಎಸ್ ರವರ ನೇತೃತ್ವದಲ್ಲಿ ದಿನಾಂಕ 15.03.2021 ಮತ್ತು 16.03.2021 ರಂದು ಪೊಲೀಸ್ ಕವಾಯತು ಮೈದಾನ ಮಂಗಳೂರು ಇಲ್ಲಿ ವಿಜೃಂಭನೆಯಿಂದ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀ ಡಾ| ರಾಜೇಂದ್ರ ಕೆ ವಿ ಐ.ಎ.ಎಸ್ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಪಶ್ಚಿಮ ವಲಯ ಪೊಲೀಸ್ […]
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ ಕಾರ್ಯಾಚರಣೆ
ಜಿಲ್ಲೆಯಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಬಂಟ್ವಾಳ ವೃತ್ತ ನಿರೀಕ್ಷಕ ಟಿ ಡಿ ನಾಗರಾಜ ರವರ ವಿಶೇಷ ತಂಡ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ವಿಟ್ಲ, ಉಪ್ಪಿನಂಗಡಿ, ಪುತ್ತೂರು ಭಾಗದಲ್ಲಿ ಸರಣಿ ಕಳ್ಳತನಗಳು ಹೆಚ್ಚಿದ ಹಿನ್ನಲೆಯಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕ ಟಿ ಡಿ ನಾಗರಾಜ್ ರವರ ನೇತೃತ್ವದಲ್ಲಿ ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕರಾದ ಅವಿನಾಶ್ ಮತ್ತು ಕಲೈಮಾರ್, ಬಂಟ್ವಾಳ ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಪ್ರಸನ್ನ ಮತ್ತು ಸಂಜೀವ್, ವಿಟ್ಲ […]
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಕಾರ್ಯಾಚರಣೆ
ದಿನಾಂಕ 02.02.2021 ರಂದು ಬೆಳಿಗ್ಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 73ರ ಬಂಟ್ವಾಳ ಸೂರಿಕುಮೇರು ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು, ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಕಾರ್ಯಪ್ರವೃತ್ತರಾದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರನ್ನೊಳಗೊಂಡಂತೆ ವಿಟ್ಲ ಪೊಲೀಸ್ ಠಾಣೆ, ಬಂಟ್ವಾಳ ಸಂಚಾರ ಪೊಲೀಸ್ ಠಾಣೆ ಮತ್ತು ಪುತ್ತೂರು ಸಂಚಾರ ಪೊಲೀಸ್ ಠಾಣೆಗಳ ಅಧಿಕಾರಿ/ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ಸ್ಥಳಕ್ಕೆ ಸಂಪರ್ಕಿಸುವ ಮಾಣಿ ಜಂಕ್ಷನ್, […]