ಕೋಲಾರ:ಬೈರೇಗೌಡ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೋಲಾರ ಗ್ರಾಮಾಂತರ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ, ಮಾನ್ಯ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡೆಕ್ಕಾ ಕಿಶೋರ್ ಬಾಬು ನೇತೃತ್ವದಲ್ಲಿ, ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವಂತಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.. ಡಿ ವೈ ಎಸ್ ಪಿ. ವಿ ಎಲ್ ರಮೇಶ್, ಕೋಲಾರ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಆಂಜಪ್ಪ, ಮತ್ತು ಗಲ್ ಪೇಟೆ ವೃತ್ತ ನಿರೀಕ್ಷಕರಾದ ಹರೀಶ್ ರವರು ಮಾತನಾಡಿ ಅಪರಾಧ ತಡೆಯುವ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀರಾಮರೆಡ್ಡಿರವರು ಉಪಸ್ಥಿತರಿದ್ದರು. 300 ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.