ಮುಂಬರುವ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಉತ್ಸವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಬಂದೋಬಸ್ತು ಕೈಗೊಳ್ಳುವ ಸಂಬಂಧ ಇಂದು ಜಿಲ್ಲಾ ಪೊಲೀಸ್ ಕಛೇರಿಗೆ ಭೇಟಿ ನೀಡಿದ ದಕ್ಷಿಣ ವಲಯದ ಮಾನ್ಯ ಡಿಐಜಿಪಿ ಯವರಾದ ಡಾ: ಎಂ.ಬಿ. ಬೋರಲಿಂಗಯ್ಯ, ಐಪಿಎಸ್ ರವರು ಜಿಲ್ಲೆಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಸೂಚನೆ ಹಾಗೂ ನಿರ್ದೇಶನಗಳನ್ನು ನೀಡಿದರು. ಈ ಸಂದರ್ಭದಲ್ಲಿ ಮಾನ್ಯ ಪೊಲೀಸ್ ಅಧೀಕ್ಷರಾದ ಶ್ರೀ ಕೆ.ರಾಮರಾಜನ್, ಐಪಿಎಸ್. ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಅಲ್ಲದೆ ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ನಡೆದ ʼಮಕ್ಕಳ ದಸರಾʼ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.