ದಿನಾಂಕ:07,08/2023 ರಂದು ಬಂದ ಖಚಿತ ವರ್ತಮಾನದ ಮೇರೆಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಸರಹದ್ದಿನ ಪ್ರೇಮ್‌ನಗರ ಅಂಡರ್ ಪಾಸ್ ಹತ್ತಿರ ಅಪೀಮನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ರಾಜಸ್ಥಾನ ಮೂಲದ ಆಸಾಮಿಯೊಬ್ಬನನ್ನು ಬಂದಿಸಿ, ಆತನ ವಶದಿಂದ 150 ಗ್ರಾಂ ತೂಕದ ಆಫೀಮನ್ನು ವಶಪಡಿಸಿಕೊಂಡು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿರುತ್ತಾರೆ.
ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ, ಆತನು ನೀಡಿದ ಮಾಹಿತಿ ಮೇರೆಗೆ
ದಿನಾಂಕ:12/08/2023 ರಂದು ಇನ್ನೊಬ್ಬ ರಾಜಸ್ಥಾನ ಮೂಲದ ಆರೋಪಿಯನ್ನು ಬಂದಿಸಿ, ಆತನ
ವಶದಿಂದ 120 ಗ್ರಾಂ ತೂಕದ ಆಫೀಮನ್ನು ವಶಪಡಿಸಿಕೊಂಡಿದ್ದು, ಒಟ್ಟು 270 ಗ್ರಾಂ ತೂಕದ ಆಪೀಮನ್ನು
ವರಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಬೆಂಗಳೂರು ನಗರದ ಪಶ್ಚಿಮ ವಿಭಾಗದ ಮಾನ್ಯ ಉಪ ಪೊಲೀಸ್ ಆಯುಕ್ತರಾದ ಶ್ರೀ. ಲಕ್ಷ್ಮಣ ಬ, ನಿಂಬರಗಿ ರವರ ಮಾರ್ಗದರ್ಶನದಲ್ಲಿ ವಿಜಯನಗರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಚಂದನ್ ಕುಮಾರ್ ಎನ್ ರವರ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆಯನ್ನು
ಕೈಗೊಂಡು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ ಲೋಹಿತ್ ಬಿ.ಎನ್, ಹಾಗೂ ಸಿಬ್ಬಂದಿಗಳ ತಂಡ ಆರೋಪಿಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಹಿರಿಯ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.
ವರದಿ : ಆಂಟೋನಿ ಬೇಗೂರು