ಬೆಂಗಳೂರು ನಗರದ ಕೋಣನಕುಂಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ಪ್ರಮ್ಯ ಇಂಟರ್‌ನ್ಯಾಷನಲ್ ಎಂಬ ಕಂಪನಿಯನ್ನು ತೆರೆದು, ಸಾರ್ವಜನಿಕರಿಗೆ ಅಧಿಕ ಲಾಭಾಂಶದ ಆಮಿಷವೊಡ್ಡಿ, ಕೋಟ್ಯಾಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿಸಿಕೊಂಡಿರುತ್ತಾರೆ.
ಇದರಿಂದ ಅಕ್ರಮವಾಗಿ ವೈಯಕ್ತಿಕ ಲಾಭ ಮಾಡಿಕೊಂಡು ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದಾರೆಂಬ ಮಾಹಿತಿ ಸಂಗ್ರಹಿಸಿದ ಸಿಸಿಬಿಯ ಆರ್ಥಿಕ ಅಪರಾಧ ದಳದ ಅಧಿಕಾರಿಗಳು, ಪಮ್ಯ ಇಂಟರ್‌ನ್ಯಾಷನಲ್ ಕಂಪನಿಯ ಮೇಲೆ ದಾಳಿ ನಡೆಸಿ, ಈ ಅಕ್ರಮ ವ್ಯವಹಾರದಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡು, ಅವರುಗಳ ವಶದಿಂದ 7 ಲಕ್ಷ ನಗದು ಹಣ, ದಾಖಲಾತಿಗಳು ಮತ್ತು ಕಂಪ್ಯೂಟರ್ ಉಪಕರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಬಂಧಿತ ಆರೋಪಿಗಳ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು, ಆರೋಪಿತರು 700 ಕ್ಕೂ ಹೆಚ್ಚು ಜನರಿಂದ 25 ಕೋಟಿಗೂ ಅಧಿಕ ಹಣವನ್ನು ಹೂಡಿಕೆ ಮಾಡಿಸಿಕೊಂಡು, ಆ ಹಣದಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ ಚರ ಹಾಗೂ ಸ್ಥಿರಾಸ್ತಿಗಳನ್ನು ಖರೀದಿ ಮಾಡಿ, ವೈಯಕ್ತಿಕ ಲಾಭ ಮಾಡಿಕೊಂಡಿರುತ್ತಾರೆಂಬ ಮಾಹಿತಿಯು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿರುತ್ತದೆ.
ಸಿಸಿಬಿಯ ಆರ್ಥಿಕ ಅಪರಾಧ ದಳದ ಅಧಿಕಾರಿ ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿರುತ್ತಾರೆ.