ಶಿರಸಿ ಶಹರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಶಿರಸಿಯ ಡಿಎಸ್‌ಪಿ, ಸಿಪಿಐ ಮತ್ತು ಪಿಎಸ್‌ಐ ಶಹರ ರವರೊಂದಿಗೆ ಸಭೆ ನಡೆಸಿ, ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಕುರಿತು ಮಾಹಿತಿ ಪಡೆಯಲಾಯಿತು. ಇದೇ ವೇಳೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆಯ ಧ್ವಜ ಚೀಟಿ ಬಿಡುಗಡೆ ಮಾಡಲಾಯಿತು. ಈ ವೇಳೆ ಶ್ರೀ ಬದರಿನಾಥ್, ಎಎಸ್‌ಪಿ, ಉ.ಕ. ಜಿಲ್ಲೆ ಹಾಗೂ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
