ದಿನಾಂಕ. 12.12.2023 ರಂದು ಬೆಂಗಳೂರು ನಗರದ ಸಿದ್ದಾಪುರ ಪೊಲೀಸ್ ಠಾಣಾ ಸರಹದ್ದಿನ, ಹೆಚ್.ಎಂ.ಟ್ರೇಡರ್ ಅಂಗಡಿಯಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ದಾಸ್ತಾನು
ಮಾಡಿಕೊಂಡು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದನ್ನು ಲೆಕ್ಕಿಸದೆ
ಸಾರ್ವಜನಿಕರನ್ನು ವಂಚಿಸಿ, ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಯ ಬಗ್ಗೆ ಬಾತ್ಮೀದಾರರಿಂದ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು, ಆ ಅಂಗಡಿಯ ಮೇಲೆ ದಾಳಿ ನಡೆಸಿ, ಒಬ್ಬ ಆರೋಪಿಯನ್ನು ವಶಕ್ಕೆ ಪಡೆದುಕೊಂಡು, ಸುಮಾರು * 10,00,000/- (ಹತ್ತು ಲಕ್ಷ) ಮೌಲ್ಯದ ಅವಧಿ ಮೀರಿದ ಚಾಲಕೇಟ್ಗಳು, ಸಿಹಿ ಪದಾರ್ಥಗಳು, ತಂಪು ಪಾನೀಯಗಳು ಹಾಗೂ ಇತರೆ ಪದಾರ್ಥಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ವಶಕ್ಕೆ ಪಡೆದ ಆರೋಪಿಯು ಪ್ರತಿಷ್ಠಿತ ಕಂಪನಿಗಳಿಂದ ಅವಧಿ ಮೀರಿದ (expired) ಪದಾರ್ಥಗಳನ್ನು ಕಡಿಮೆ ಬೆಲೆಗೆ ಖರೀದಿಸಿ, ಅಕ್ರಮವಾಗಿ ಸಂಗ್ರಹಿಸಿಕೊಂಡು ಆ ಪದಾರ್ಥಗಳ ಮೇಲಿನ ದಿನಾಂಕದ ಅವಧಿ ಮತ್ತು ದರ ಪಟ್ಟಿಯ ಲೇಬಲ್ಗಳನ್ನು ತೆಗೆದುಹಾಕಿ, ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದ್ದು, ಈ ಸಂಬಂಧ ಆರೋಪಿಯ ವಿರುದ್ದ ಸಿದ್ದಾಪುರ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿರುತ್ತದೆ.
ಈ ಕಾರ್ಯಾಚರಣೆಯನ್ನು ಸಿ.ಸಿ.ಬಿ ಆರ್ಥಿಕ ಅಪರಾಧ ದಳದ ಸಿಬ್ಬಂದಿಗಳು ಆಹಾರ ಸುರಕ್ಷತಾ ಅಧಿಕಾರಿಗಳ ಸಹಯೋಗದೊಂದಿಗೆ ಕೈಗೊಂಡಿರುತ್ತಾರೆ.