ಆರ್.ಎಂ.ಸಿ. ಯಾರ್ಡ್ ಪೊಲೀಸ್ ಠಾಣಾ ಸರಹದ್ದಿನ ಯಶವಂತಪುರ ಕೈಗಾರಿಕಾ ಪ್ರದೇಶದ ಉಲ್ಲಾಸ್ ರಸ್ತೆಯಲ್ಲಿ ದಿನಾಂಕ:10-08-2023 ರಂದು ಸಂಜೆ 1-30 ಗಂಟೆಯಲ್ಲಿ ವ್ಯಕ್ತಿಯೊಬ್ಬ ಆಕ್ರಮವಾಗಿ ಆನೆ ದಂತಗಳನ್ನು ಚೀಲದಲ್ಲಿ ಇಟ್ಟುಕೊಂಡು ಮಾರಾಟ ಮಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿಯ ಮೇರೆಗೆ, ಕಾರ್ಯ ಪ್ರವೃತ್ತರಾದ ಪೊಲೀಸರು ದಾಳಿ ಮಾಡಿ, ಒಬ್ಬ ಆಸಾಮಿಯನ್ನು ಬಂಧಿಸಿ, ಆರೋಪಿಯ ವಶದಿಂದ 7.42 ಕೆ.ಜಿ. ತೂಕದ 5 ಆನೆ ದಂತದ ತುಂಡುಗಳನ್ನು ವಶಕ್ಕೆ ಪಡೆದುಕೊಂಡು ಆರೋಪಿತನ ವಿರುದ್ಧ ಆರ್.ಎಂ.ಸಿ.ಯಾರ್ಡ್ ಪೊಲೀಸ್ ಠಾಣೆ ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಪ್ರಮುಖ ಆರೋಪಿಯು ತಲೆಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ಪ್ರಗತಿಯಲ್ಲಿರುತ್ತದೆ.
ಈ ಪ್ರಕರಣದಲ್ಲಿ ಶ್ರೀ ಶಿವ ಪ್ರಕಾಶ್, ದೇವರಾಜು, ಉಪ ಪೊಲೀಸ್ ಆಯುಕ್ತರು, ಉತ್ತರ ವಿಭಾಗ `ರವರ ಮಾರ್ಗದರ್ಶನದಲ್ಲಿ ಶ್ರೀ ಸದಾನಂದ ಎ ತಿಪ್ಪಣ್ಣವರ್, ಎಸಿಪಿ, ಪೀಣ್ಯ ಉಪ ವಿಭಾಗ ಮತ್ತು ಶ್ರೀ ಸುರೇಶ್… ಪೊಲೀಸ್ ಇನ್ಸ್ಪೆಕ್ಟರ್, ಆರ್.ಎಂ.ಸಿ.ಯಾರ್ಡ್ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಹಾಗೂ ಸಿಬ್ಬಂದಿಯವರುಗಳು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ.ಬಿ.ದಯಾನಂದ ರವರು ಮತ್ತು ಪಶ್ಚಿಮ ವಿಭಾಗದ ಅಪರ ಪೊಲೀಸ್ ಆಯುಕ್ತರಾದ ಶ್ರೀ. ಎನ್.ಸತೀಶ್ ಕುಮಾರ್ ರವರು ಶ್ಲಾಘಿಸಿರುತ್ತಾರೆ.
ವರದಿ : ಆಂಟೋನಿ ಬೇಗೂರು