ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕಿರಣ್ ಕೊಡ್ಗಿ ಇವರು ತಮ್ಮ ಪ್ರದೇಶ ಅಭಿವೃದ್ಧಿ ನಿಧಿ ಅಡಿಯಲ್ಲಿ ಮಹೇಂದ್ರ ಕಂಪನಿಯ ಬೊಲೆರೋ ಜೀಪ್ ನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ನೀಡಿರುತ್ತಾರೆ.
ದಿನಾಂಕ 05.01.2026 ರಂದು ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶ್ರೀ ಕಿರಣ್ ಕೊಡ್ಗಿ ರವರು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್, ಐಪಿಎಸ್ ರವರಿಗೆ ಜೀಪಿನ ಕೀ ಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀ ತಿಮ್ಮಪ್ಪ ಗೌಡ, ಪೊಲೀಸ್ ಉಪಾಧೀಕ್ಷಕರು, ಡಿಎಆರ್, ಉಡುಪಿ, ಶ್ರೀ ರವಿ ಕುಮಾರ್, ಪೊಲೀಸ್ ನಿರೀಕ್ಷಕರು, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಸಹಾಯಕ ಆಡಳಿತ ಅಧಿಕಾರಿಯವರಾದ ಶ್ರೀ ಗೋಪಾಲ್ ಇವರು ಹಾಜರಿದ್ದರು.
ಉಡುಪಿಯ ನಮ್ಮ ವರದಿಗಾರ,

ವಿಲ್ಸನ್ ಡಿ’ಸೋಜ







