ದಿನಾಂಕ:27-04-2022 ರಂದು ಉತ್ತರಕನ್ನಡ ಜಿಲ್ಲೆಯ ಕಾರವಾರದ ಕಾಜುಭಾಗದಲ್ಲಿ ನೂತನವಾಗಿ ನಿರ್ಮಿಸಲಾದ ಪೊಲೀಸ್ ಕಲ್ಯಾಣ ಮಂಟಪದ ಉದ್ಘಾಟನೆ ಮಾಡಲಾಯಿತು.
ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾನ್ಯ ಜಿಲ್ಲಾಧಿಕಾರಿಗಳಾದ ಮುಲೈ ಮುಹಿಲನ್ ಎಂ ಪಿ ಐಎಎಸ್ ಹಾಗೂ ವಿಶೇಷ ಆಹ್ವಾನಿತರಾಗಿ ಶ್ರೀಮತಿ ಪ್ರಿಯಾಂಗಾ ಎಂ ಐಎಎಸ್ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿಗಳು ಉತ್ತರಕನ್ನಡ ಜಿಲ್ಲೆ ಮತ್ತು ಡಾ.ಪ್ರಶಾಂತಕುಮಾರ್ ಕೆ ಸಿ ಐಎಫ್ಎಸ್ ಉಪ ಸಂರಕ್ಷಣಾ ಅಧಿಕಾರಿ ಕಾರವಾರ ರವರು ಆಗಮಿಸಿದ್ದರು.
ಸಮಾರಂಭದಲ್ಲಿ ಮಾನ್ಯ ಪೊಲೀಸ್ ವರಿಷ್ಟಾಧಿಕಾರಿಗಳಾದ ಶ್ರೀಮತಿ ಸುಮನ್ ಡಿ ಪೆನ್ನೇಕರ್ ಐಪಿಎಸ್ ರವರು ಪ್ರಸ್ತಾವಿಕವಾಗಿ ಮಾತನಾಡಿ ಪೊಲೀಸ್ ಕಲ್ಯಾಣ ಮಂಟಪವನ್ನು ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಪೊಲೀಸ್ ಕಲ್ಯಾಣ ಮಂಟಪವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು ಹಾಗೂ ಸಮಾರಂಭದ ಅಥಿತಿಗಳಾದ ಮಾನ್ಯ ಜಿಲ್ಲಾಧಿಕಾರಿಗಳು ಮಾತನಾಡಿ ಪೊಲೀಸ್ ಸಿಬ್ಬಂದಿಗಳಿಗೆ ಇತ್ತೀಚಿನ ದಿನಗಳಲ್ಲಿ ಸರ್ಕಾರವು ಪೊಲೀಸರಿಗೆ ಒಳ್ಳೆಯ ಸುಸಜ್ಜಿತ ವಸತಿಗೃಹ ಹಾಗೂ ಕಲ್ಯಾಣ ಮಂಟಪ ನಿರ್ಮಿಸುತ್ತಿದ್ದು ಅದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು ಕಾರ್ಯಕ್ರಮದಲ್ಲಿ ವಾಲೆಂಟೈನ್ ಡಿಸೋಜ ಪೊಲೀಸ್ ಉಪಾದಿಕ್ಷಕರು ಕಾರವಾರ ರವರು ಸ್ವಾಗತಿಸಿದರು. ಹಾಗೂ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಶ್ರೀ ಬದರಿನಾಥ್ ರವರು ವಂದಿಸಿದರು ಕಾರ್ಯಕ್ರಮದಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಹಾಗೂ ಕುಟುಂಬ ವರ್ಗದವರು ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ಲಿಪಿಕ ಸಿಬ್ಬಂದಿಗಳು ಮತ್ತು ಮಾಧ್ಯಮ ಮಿತ್ರರು ಪಾಲ್ಗೊಂಡಿದ್ದರು.