ಸುಮಾರು 20.00 ಲಕ್ಷ ರೂ ಮೌಲ್ಯದ MDMA ಮಾದಕ ವಸ್ತು ವಶ ಯುವಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕ ವಸ್ತುಗಳನ್ನು ಬಸವನಗುಡಿ
ಠಾಣೆ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ, ಕಾರ್ಯಪ್ರವೃತ್ತರಾದ ಬಸವನಗುಡಿ ಪೊಲೀಸರು ಕೇರಳ ಮೂಲದ ಆರೋಪಿಯೊಬ್ಬನನ್ನು ಬಂಧಿಸಿ, ಆತನಿಂದ ನಿಷೇಧಿತ ಮಾದಕ ವಸ್ತು 200 ಗ್ರಾಂ ತೂಕದ MDMA ಮತ್ತು ಕೃತ್ಯಕ್ಕೆ ಉಪಯೋಗಿಸಿದ್ದ ವೆಸ್ತಾ ದ್ವಿ ಚಕ್ರವಾಹನ, ಮೊಬೈಲ್ ಫೋನ್ ಮತ್ತು ನಗದು ಹಣವನ್ನು ಅಮಾನತ್ತುಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಇದರ ಒಟ್ಟು ಮೌಲ್ಯ ಸುಮಾರು 20 ಲಕ್ಷ ರೂಪಾಯಿ, ಬೆಂಗಳೂರು ನಗರ, ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಪಿ.ಕೃಷ್ಣಕಾಂತ್ ಮತ್ತು ಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಕೆ.ವಿ.ಶ್ರೀನಿವಾಸ್ ರವರ ಮಾರ್ಗದರ್ಶನದಲ್ಲಿ ಬಸವನಗುಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ಸುಬ್ರಹ್ಮಣ್ಯಸ್ವಾಮಿ ಎಂ.ಎಲ್. ಆರೋಪಿಯನ್ನು ದಸ್ತಗಿರಿ ಮಾಡಿ ಮಾದಕ ರವರ ನೇತೃತ್ವದ ಸಿಬ್ಬಂದಿಯವರ ತಂಡ ಆರೋಪಿಯನ್ನು ದಸ್ತಗಿರಿ ಮಾಡಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ. ಬಿ.ದಯಾನಂದ ರವರು ಮತ್ತು ಪಶ್ಚಿಮ ವಿಭಾಗದ ಅಪರ ಪೊಲೀಸ್ ಆಯುಕ್ತರಾದ ಶ್ರೀ. ಎನ್.ಸತೀಶ್ ಕುಮಾರ್ ರವರು ಶ್ಲಾಘಿಸಿರುತ್ತಾರೆ.