ಬೆಂಗಳೂರು ನಗರದ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಮೊಬೈಲ್ ಸುಲಿಗೆ ಪ್ರಕರಣವು ದಾಖಲಾಗಿದ್ದು, ಮೊಬೈಲ್ ಪತ್ತೆ ಮಾಡುವ ಸಲುವಾಗಿ ಕಾರ್ಯ ಪವೃತ್ತರಾದ ಬಸವನಗುಡಿ ಪೊಲೀಸರು 03 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸಲಾಗಿ ಅವರು ನೀಡಿದ ಮಾಹಿತಿ ಮೇರೆಗೆ ಬಸವನಗುಡಿ ಠಾಣೆಯ ಒಂದು ಮೊಬೈಲ್ ಸುಲಿಗೆ ಪ್ರಕರಣ, ಬ್ಯಾಟರಾಯನಪುರ ಪೊಲೀಸ್ ಠಾಣಾ ಸರಹದ್ದಿನ ಒಂದು ದ್ವಿಚಕ್ರ ವಾಹನ ಹಾಗೂ ಜೆಪಿ ನಗರ ಠಾಣಾ ವ್ಯಾಪ್ತಿಯ 6 ಗ್ರಾಂ ಚಿನ್ನದ ಸರ ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡುಬಂದಿರುತ್ತದೆ. ಇದುವರೆಗೂ ಆರೋಪಿಗಳಿಂದ ವಿವಿಧ ಕಂಪನಿಗಳ ಒಟ್ಟು ಮೊಬೈಲ್ ಫೋನ್‌ಗಳನ್ನು 51 ವಶಪಡಿಸಿಕೊಳ್ಳಲಾಗಿದೆ. ಹಾಗೂ ಆರೋಪಿಗಳು ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಇನ್ನಷ್ಟು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ತನಿಖೆಯನ್ನು ಮುಂದುವರಿಸಲಾಗಿದೆ.
ಬೆಂಗಳೂರು ನಗರ ದಕ್ಷಿಣ ವಿಭಾಗದ ಉಪ-ಪೊಲೀಸ್ ಆಯುಕ್ತರಾದ ಪಿ.ಕೃಷ್ಣಕಾಂತ್, ಐ.ಪಿ.ಎಸ್ ಮತ್ತು ಜಯನಗರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಕೆ.ವಿ.ಶ್ರೀನಿವಾಸ್ ರವರ ಮಾರ್ಗದರ್ಶನದಲ್ಲಿ ಬಸವನಗುಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ಸುಬ್ರಹ್ಮಣ್ಯ ಸ್ವಾಮಿ ರವರ ನೇತೃತ್ವದ ತಂಡ ಕಾರ್ಯಾಚರಣೆಯನ್ನು ಕೈಗೊಂಡು ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ.ಬಿ.ದಯಾನಂದ ರವರು ಮತ್ತು ಪಶ್ಚಿಮ ವಿಭಾಗದ ಅಪರ ಪೊಲೀಸ್ ಆಯುಕ್ತರಾದ ಶ್ರೀ.ಎನ್. ಸತೀಶ್ ಕುಮಾರ್ ರವರು ಶ್ಲಾಘಿಸಿರುತ್ತಾರೆ.