ಬೆಂಗಳೂರು ನಗರ ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಓರ್ವ ಡ್ರಗ್‌ಪೆಡ್ಲರ್‌ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು, ಆತನಿಂದ ಅಂದಾಜು 7 8,40,000/- ಮೌಲ್ಯದ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು ನಗರ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು 2024ರ ಹೊಸವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಡ್ರಗ್ ಪೆಡ್ಲರ್‌ಗಳ ಮೇಲೆ ವಿಶೇಷವಾದ ಕಾರ್ಯಚರಣೆಯನ್ನು ನಡೆಸಿರುತ್ತಾರೆ. ಈ ಸಂಬಂಧ ಬಾತ್ಮಿದಾರರಿಂದ ನಿಖರವಾದ ಮಾಹಿತಿಯನ್ನು ಸಂಗ್ರಹಿಸಿ, ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಓರ್ವ ಡ್ರಗ್‌ಪೆಡ್ಲರ್‌ನನ್ನು ವಶಕ್ಕೆ ಪಡೆದು, ಆತನಿಂದ ನಿಷೇಧಿತ ಮಾದಕ ವಸ್ತುಗಳಾದ MDMA Crystal 25g, Ecstasy pills, 30 No’s, Ganja 1.54 kg ಮತ್ತು ಕೃತ್ಯಕ್ಕೆ ಬಳಸಲಾಗುತ್ತಿದ್ದ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಶಕ್ಕೆ ಪಡೆದು ವ್ಯಕ್ತಿಯು ಮೂಲತಃ ಬೆಂಗಳೂರಿನ ದೊಮ್ಮಲೂರಿನವನಾಗಿದ್ದು ಬಿ.ಎ ವ್ಯಾಸಂಗ ಮಾಡಿರುತ್ತಾನೆ. ಈತನು 2024ರ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಡ್ರಗ್ ಪೆಡ್ಡಿಂಗ್ ಮಾಡಿ ಅಕ್ರಮ ಹಣ ಸಂಪಾದನೆ ಮಾಡುವ ಉದ್ದೇಶದಿಂದ ನಿಷೇಧಿತ ಮಾದಕ ವಸ್ತುಗಳಾದ ಎಂ.ಡಿ.ಎಂ.ಎ ಕ್ರಿಸ್ಟೆಲ್, ಎಕ್ಸ್‌ಟಿಸಿ ಪಿಲ್ಸ್‌ಗಳು ಮತ್ತು ಗಾಂಜಾವನ್ನು ಸ್ಥಳೀಯ ಡ್ರಗ್‌ಪೆಡ್ಲರ್‌ಗಳಿಂದ ಖರೀಧಿಸಿ ಪರಿಚಯಸ್ಥ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದನು. ಈತನ ವಿರುದ್ದ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
ಈ ಕಾರ್ಯಾಚರಣೆಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.