ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಾತಗುಣಿ ಗ್ರಾಮದಲ್ಲಿ ದೂರುದಾರರು ಹೊಸ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ ಜಾಗದಲ್ಲಿ ಕಟ್ಟಡಕ್ಕೆ ಬೇಕಾದ ಕಬ್ಬಿಣದ ಸಾಮಾಗ್ರಿಗಳನ್ನು ತಮ್ಮ ಖಾಲಿ ನಿವೇಶನದಲ್ಲಿ ಹಾಕಿಕೊಂಡಿದ್ದು, ಸದರಿ ಕಬ್ಬಿಣದ ಸಾಮಾಗ್ರಿಗಳನ್ನು ದಿನಾಂಕ:21.01.2025 ರಂದು ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದೂರುದಾರರು ನೀಡಿದ ದೂರಿನ ಮೇರೆಗೆ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮೊ.ಸಂ:23/2025 ಕಲಂ: 303 (2) ಬಿ.ಎನ್.ಎಸ್ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.
ಸದರಿ ಪ್ರಕರಣದಲ್ಲಿ ಆರೋಪಿಗಳ ಪತ್ತೆಗೆ ಮಾಹಿತಿ ಕಲೆಹಾಕಿ ದಿನಾಂಕ: 04.02.2025 ರಂದು ಒಟ್ಟು ಮೂರು ಜನ ಆರೋಪಿಗಳನ್ನು ವಶಕ್ಕೆ ಪಡೆದು, ತನಿಖೆ ನಡೆಸಿ, ಸುಮಾರು 77,000/- ರೂ ಮೌಲ್ಯದ ಕಬ್ಬಿಣದ ಸಾಮಾಗ್ರಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಅಶೋಕ್ ಲೈಲ್ಯಾಂಡ್ ಲಾರಿಯನ್ನು ಅಮಾನತ್ತು ಪಡಿಸಿಕೊಂಡು, ಪ್ರಕರಣ ಪತ್ತೆ ಮಾಡುವಲ್ಲಿ ಕಗ್ಗಲೀಪುರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿರುತ್ತಾರೆ.