ಕರ್ನಾಟಕ ಸರ್ಕಾರವು ಕನ್ನಡ ರಾಜ್ಯೋತ್ಸವದ ಅಂಗವಾಗಿ \”ಕನ್ನಡಕ್ಕಾಗಿ ನಾವು \” ಎಂಬ ವಿಶೇಷ ಅಭಿಯಾನವನ್ನು ಆಯೋಜಿಸಿದ್ದು, ದಿನಾಂಕ: 28.10.2021ರಂದು ಬೆಳಗ್ಗೆ 11.00 ಗಂಟೆಗೆ ರಾಜ್ಯಾದ್ಯಂತ ಲಕ್ಷ ಕಂಠಗಳ ಕನ್ನಡ ಗೀತ ಗಾಯನ ಕಾರ್ಯಕ್ರಮವನ್ನು ನಡೆಸಲು ಆದೇಶಿಸಿದ್ದು ಇದರಂತೆ ಮೈಸೂರು ನಗರ ಪೊಲೀಸ್ ಆಯುಕ್ತರ ಕಛೇರಿಯಲ್ಲಿ ಪೊಲೀಸ್ ಆಯುಕ್ತ ರಾದ ಡಾ: ಚಂದ್ರಗುಪ್ತ ಐ.ಪಿ.ಎಸ್. ರವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.