ದಿನಾಂಕ:21/03/2024 ರಂದು ವಿಜಯನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಹಂಪಿನಗರ ವಾಸಿಯೊಬ್ಬರು ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:20/03/2024 ರಂದು ರಾತ್ರಿ ಸುಮಾರು 08.00 ಗಂಟೆಯ ಸಮಯದಲ್ಲಿ ತಮ್ಮ ಕಛೇರಿಯಲ್ಲಿ
ಕೆಲಸ ಮಾಡುತ್ತಿದ್ದ ಓರ್ವ ವ್ಯಕ್ತಿಯು ತಮ್ಮ ಕಛೇರಿಯ ಕಾರ್ ಸೆಕ್ಷನ್‌ನಲ್ಲಿಟ್ಟಿದ್ದ. ನಗದು ಹಣ
7.25.00.000/-(ಇಪತ್ತೈದು ಲಕ್ಷ ರೂಪಾಯಿನ್ನು ಕಳವು ಮಾಡಿಕೊಂಡು ಹೋಗಿರುತ್ತಾನೆಂದು ದೂರನ್ನು ಸಲ್ಲಿಸಿರುತ್ತಾರೆ. ಈ ಕುರಿತು ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ನಂತರ ಪ್ರಕರಣದಲ್ಲಿ ತನಿಖೆಯನ್ನು ಮುಂದುವರೆಸಿದ ಪೊಲೀಸರು. ತನಿಖೆ ಕೈಗೊಂಡು ಬಾತ್ಮೀದಾರರಿಂದ ಮಾಹಿತಿಯನ್ನು ಕಲೆಹಾಕಿ ಕಳವು ಮಾಡಿದ ವ್ಯಕ್ತಿಯನ್ನು ದಿನಾಂಕ: 28-04-2024 ರಂದು ಮಧ್ಯಾಹ್ನ ಮಡಿಕೇರಿ ಟೋಲ್‌ಗೇಟ್ ಬಳಿ ಪತ್ತೆಮಾಡಿ ವಶಕ್ಕೆ ಪಡುದುಕೊಂಡಿರುತ್ತಾರೆ. ವಶಕ್ಕೆ ಪಡೆದ ವ್ಯಕಿಯನ್ನು ಬೆಂಗಳೂರಿಗೆ ಕರೆತಂದು ವಿಚಾರಣೆಗೊಳಪಡಿಸಲಾಯಿತು. ಆತನು ಕಳುವು ಮಾಡಿರುವುದಾಗಿ ತಪ್ಪಿಕೊಂಡ ಮೇರೆಗೆ ಅದೇದಿನ ದಿನಾಂಕ:28-04-2024 ನ್ಯಾಯಾಲಕ್ಕೆ ಹಾಜರುಪಡಿಸಿ 05 ದಿನಗಳ ಕಾಲ ಪೊಲೀಸ್ ಅಭಿರಕೆಗೆ ಪಡೆಯಲಾಯಿತು.
ಕಳವು ಮಾಡಿದ ವ್ಯಕ್ತಿಯನ್ನು ಸುಧೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ತಾನು ಕಳವು ಮಾಡಿದ ನಗದು ಹಣವನ್ನು ಮೂಡಲಪಾಳ್ಯದಲ್ಲಿರುವ ತನ್ನ ಸ್ನೇಹಿತನ ರೂಂನಲ್ಲಿ ಇಟ್ಟಿರುವುದಾಗಿ ತಿಳಿಸಿದ್ದು, ನಂತರ ಆತನ ಸ್ನೇಹಿತನ ಮನೆಯಿಂದ 24.50.000/- ಇಪ್ಪತ್ನಾಲ್ಕು ಲಕ್ಷದ ಐವತ್ತು ಸಾವಿರ) ನ್ನು ವಶ ಪಡಿಸಿಕೊಳ್ಳಲಾಗಿದೆ. ನಂತರ ಅರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರಡಿಸಿದ್ದು. ಮಾನ್ಯ ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಬೆಂಗಳೂರು ನಗರ ಪಶ್ಚಿಮ ವಿಭಾಗದ ಮಾನ್ಯ ಉಪ ಪೊಲೀಸ್ ಆಯುಕ್ತರಾದ ಶ್ರೀ.ಎಸ್.ಗಿರೀಶ್ ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ವಿಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಚಂದನ್ ಕುಮಾರ್ ರವರ ಮಾರ್ಗದರ್ಶನದಲ್ಲಿ ವಿಜಯನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ಎಸ್.ಕೆ ನದಾಫ್ ರವರ ನೇತೃತ್ವದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಯವರು
ಪಕರಣವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.