ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ದಿನಾಂಕ:05.02.2021 ರಂದು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯ ಸಭೆಯನ್ನು ಹಮ್ಮಿಕೊಂಡಿದ್ದು ಸದರಿ ಸಭೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವುದರ ಜೊತೆಗೆ ಕಾಯ್ದೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಮಾನ್ಯ ಜಿಲ್ಲಾಧಿಕಾರಿ ಶ್ರೀಮತಿ ಕವಿತಾ ಎಸ್.ಮನ್ನಿಕೇರಿ ಐ.ಎ.ಎಸ್., ಅಧಿಕಾರಿಗಳಿಗೆ ಸೂಚನೆ ನೀಡಿದರು ಹಾಗೂ ಅಕ್ರಮ ಜಾನುವಾರು ಸಾಗಾಟದಲ್ಲಿ ತೊಡಗಿದವರಿಗೆ, ಮೊದಲ ಸಲ ಅಪರಾದಕ್ಕೆ 3 ವರ್ಷದಿಂದ 7 ವರ್ಷ ಕಾರಾಗೃಹವಾಸ ಅಥವಾ ಒಂದು ಜಾನುವಾರಿಗೆ ರೂ. 50,000/-ಗಳಂತೆ ರೂ. 5 ಲಕ್ಷದವರೆಗೆ ತಂಡ ವಿಧಿಸಬಹುದಾಗಿದೆ. ಮುಂದುವರೆದ ಅಪರಾಧಕ್ಕೆ ರೂ.1 ಲಕ್ಷದಿಂದ 10 ಲಕ್ಷದವರೆಗೆ ದಂಡ ಅಥವಾ 7 ವರ್ಷ ಕಾರಾಗೃಹವಾಸ ದಂಡನೆ ವಿಧಿಸಬಹುದಾಗಿದೆ ಎಂದು ತಿಳಿಸಿರುತ್ತಾರೆ. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಜಿ.ರಾಧಿಕಾ, ಐ.ಪಿ.ಎಸ್., ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ, ಡಿವೈಎಸ್ಪಿ ಪಾಂಡುರಂಗ, ತಹಶೀಲ್ದಾರ್ಗಳು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರು, ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘದ ಸದಸ್ಯರು ಉಪಸ್ಥಿತರಿದ್ದರು.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,