ಮಾಗಡಿರಸ್ತೆ ಪೊಲೀಸ್ ಠಾಣಾ ಸರಹದ್ದಿನ ಅಗ್ರಹಾರ ದಾಸರಹಳ್ಳಿ ಎಂ.ಎಂ ಕಾಂಪ್ಲೆಕ್ಸ್‌ನಲ್ಲಿರುವ ಸಿಲಿಕಾನ್ ಸ್ಪೋರ್ಟ್ಸ್ ಅಂಡ್ ಕಲ್ಬರಲ್ ಇನ್ಸಿಟ್ಯೂಟ್‌ನಲ್ಲಿ ಕೆಲವರು ಹಣವನ್ನು ಪಣವಾಗಿ ಕಟ್ಟಿಕೊಂಡು ಇಸ್ಟಿಟ್ ಎಲೆಗಳಿಂದ ಅದೃಷ್ಟದ ಜೂಜಾಟ ಆಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸದರಿ ಸ್ಥಳದ ಮೇಲೆ ಮುಂದಿನ ಕ್ರಮ ಕೈಗೊಳ್ಳಲು ಮಾನ್ಯ ಎಂ ಎಂ ಟಿ ಸಿ ನ್ಯಾಯಾಲಯದಿಂದ ಅನುಮತಿಯನ್ನು ಪಡೆದುಕೊಂಡು, ಪಂಚರುಗಳ ಸಮಕ್ಷಮ ದಾಳಿ ಮಾಡಿ, ಕೊಟ್ಟಾ ಕಾಯ್ದೆ ಅಡಿ ಪ್ರಕರಣವನ್ನು ದಾಖಲಸಿಕೊಂಡು ಕೃತ್ಯದಲ್ಲಿ ಬಾಗಿಯಾಗಿದ್ದ ಒಟ್ಟು 43 ಜನ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು, ಅವರಿಂದ ಕೃತ್ಯಕ್ಕೆ ಬಳಸುತ್ತಿದ್ದ ಹೈ ಸ್ಟೈಕ್ಸ್ ಟೋಕನ್‌ಗಳು, 312 ಇಸ್ಪೀಟ್ ಎಲೆಗಳು, ಫೋನ್ ಪೇ ಸ್ಕ್ಯಾನರ್, ಸಿಗರೆಟ್ಸ್ ಪ್ಯಾಕ್‌ಗಳು ಮತ್ತು ಜಾಕ್‌ಪಾಟ್ ಕ್ಲೀಪ್‌ಗಳನ್ನು ಅಮಾನತ್ತುಪಡಿಸಿಕೊಂಡಿರುತ್ತಾರೆ.
ಈ ಯಶಸ್ವಿ ಕಾರ್ಯಾಚರಣೆಯನ್ನು ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರವರಾದ ಶ್ರೀ ಗಿರೀಶ್ ಎನ್. ರವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಮಾಗಡಿ ರಸ್ತೆ ಪೊಲೀಸ್ ಠಾಣೆಯ
ಪೋನ್ ಇನ್ಸ್‌ಪೆಕ್ಟರ್ ಶ್ರೀ ರಾಜು, ಜಿ.ಪಿ, ಹಾಗೂ ಸಿಬ್ಬಂದಿ ರವರನ್ನೊಳಗೊಂಡ ತಂಡವು ದಾಳಿಮಾಡಿ ಮಾಲುಗಳನ್ನು ವಶಪಡಿಸಿಕೊಳ್ಳವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಇಲಾಖೆಯು ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.