30 ಗ್ರಾಂ ಚಿನ್ನದ ಸರ, 2 ದ್ವಿ-ಚಕ್ರ ವಾಹನ ಹಾಗೂ 1 ಆಟೋ ರಿಕ್ಷಾ ವಶ. ಮೌಲ್ಯ 14 ಲಕ್ಷ ಪೀಣ್ಯ ಪೊಲೀಸ್ ಸರಹದ್ದಿನ ಕೆಂಪಯ್ಯ ಗಾರ್ಡನ್ ಬಳಿ ಫಿಲ್ಯಾದಿಯವರು ದಿನಾಂಕ:14/07/2024 ರಂದು ಬೆಳಿಗ್ಗೆ 6-10 ಗಂಟೆ ಸಮಯದಲ್ಲಿ ಕೆಲಸಕ್ಕೆ ಹೋಗುವ ಸಲುವಾಗಿ ನಡೆದುಕೊಂಡು ಹೋಗುತ್ತಿರುವಾಗ್ಗೆ. ಒಂದು ದ್ವಿ-ಚಕ್ರ ವಾಹನದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಫಿಲ್ಯಾದಿಯನ್ನು ಅಡ್ಡಗಟ್ಟಿ, ಅವರ ಕೊರಳಿನಲ್ಲಿದ್ದ 30 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿರುತ್ತಾರೆ. ಈ ಕುರಿತು ಫಿರಾದಿಯವರು ಪೀಣ್ಯ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದು, ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಮಾಹಿತಿಯನ್ನು ಕಲೆಹಾಕಿ, ದಿನಾಂಕ:24/07/2024 ರಂದು ಬೆಳಿಗ್ಗೆ ಪೀಣ್ಯ ಪೊಲೀಸ್ ಠಾಣಾ ಸರಹದ್ದಿನ ಗಂಗೊಂಡನಹಳ್ಳಿ ಮುಖ್ಯರಸ್ತೆಯಲ್ಲಿ ನಾಲ್ವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ಆಟೋ ರಿಕ್ಷಾ ಹಾಗೂ ಒಂದು ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆಯಲಾಯಿತು. ನಂತರ ಅವರುಗಳನ್ನು ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ.
02-
ಕಾನೂನು ಸಂಘರ್ಷಕ್ಕೊಳಗಾದ ಬಾಲಕರುಗಳನ್ನು ಸುದೀರ್ಘವಾಗಿ ವಿಚಾರಣೆ ಅವರುಗಳಿಂದ 30 ಗ್ರಾಂ ತೂಕದ ಚಿನ್ನದ ಸರ ಹಾಗೂ ಕಳುವು ಮಾಡಿದ್ದ 01-ಆಟೋ ರಿಕ್ಷಾ ಮತ್ತು ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಅವುಗಳ ಒಟ್ಟು ಮೌಲ್ಯ 4,00,000/- (ನಾಲ್ಕು ಲಕ್ಷ ರೂಪಾಯಿ).
ದಿನಾಂಕ:25/07/2024 ರಂದು ಕಾನೂನು ಸಂಘರ್ಷಕ್ಕೊಳಗಾದ ನಾಲ್ವರು ಬಾಲಕರನ್ನು ಮಾನ್ಯ ಬಾಲ ನ್ಯಾಯ ಮಂಡಳಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಧೀಶರು ಬಾಲಕರನ್ನು ರಿಮ್ಯಾಂಡ್ ಹೋಂಗೆ ಅದೇಶ ಮಾಡಿರುತ್ತಾರೆ.
ಈ ಕಾರ್ಯಾಚರಣೆಯನ್ನು ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಸೈದುಲು ಅಡಾವತ್, ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ ಶ್ರೀ. ಸದಾನಂದ ಎ ತಿಪ್ಪಣ್ಣವರ್, ಸಹಾಯಕ ಪೊಲೀಸ್ ಆಯುಕ್ತರು ಪೀಣ್ಯ ಉಪ ವಿಭಾಗ ರವರ ನೇತೃತ್ವದಲ್ಲಿ, ಪೀಣ್ಯ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ. ಕುಮಾರ್ ಎಂ.ಎಸ್. ಮತ್ತು ಅಧಿಕಾರಿ/ಸಿಬ್ಬಂದಿಯವರುಗಳು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.