ದಿನಾಂಕ 21-10-2025 ರಂದು ಪೊಲೀಸ್ ಹುತಾತ್ಮರ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಕರ್ತವ್ಯದಲ್ಲಿ ಹುತಾತ್ಮರಾದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಮನವನ್ನು ಸಲ್ಲಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಎ. ಸಮೀವುಲ್ಲಾ 2nd Addl District & Session Judge, Udupi ಇವರು ಭಾಗವಹಿಸಿರುತ್ತಾರೆ. ಪೊಲೀಸ್ ಅಧೀಕ್ಷಕರು ಹಾಗೂ ಜಿಲ್ಲೆಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು. ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾ ದ್ವಿತೀಯ ಸತ್ರ ನ್ಯಾಯಾಲಯದ ನ್ಯಾಯಧೀಶ ಎ. ಸಮೀವುಲ್ಲಾ ಹೇಳಿದರು.
ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಂಗಳವಾರ 21-10-2025 ರಂದು ಚಂದು ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿ ಅವರು ಮಾತನಾಡಿದರು.
ಹಗಲು-ರಾತ್ರಿ ಎನ್ನದೇ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡಲು ಪೊಲೀಸ್ ಸಿಬ್ಬಂದಿ ಸದಾ ಕಾರ್ಯನಿರತರಾಗಿರುತ್ತಾರೆ. ಪೊಲೀಸರು ಕೇವಲ ಅಪರಾಧ ಪ್ರಕರಣಗಳನ್ನು ತಡೆಯುವುದು ಮಾತ್ರವಲ್ಲ ಪ್ರಾಕೃತಿಕ ವಿಕೋಪ, ಕೋವಿಡ್ ಸಂದರ್ಭದಲ್ಲಿ ಪೊಲೀಸರು ನಿರ್ವಹಿಸಿದ ಸೇವೆ ಅನನ್ಯವಾದುದು. ಇಂದು ನಾವು ನೆಮ್ಮದಿಯ ಜೀವನ ನಡೆಸಲು ಪೊಲೀಸರ ಸೇವೆ ಕಾರಣವಾಗಿದೆ. ಅಂತಹ ಪೊಲೀಸ್ ಸಿಬ್ಬಂದಿಯ ಬಗ್ಗೆ ಸಮಾಜ ಸದಾ ಗೌರವ ಭಾವ ಹೊಂದಿರಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾತನಾಡಿ, ದೇಶದಲ್ಲಿ 1 ವರ್ಷದಲ್ಲಿ 191 ಪೊಲೀಸರು ಕರ್ತವ್ಯ ನಿರ್ವಹಣೆ ಸಂದರ್ಭದಲ್ಲಿ ಮತಪಟ್ಟಿದ್ದು ಅವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಪುಷ್ಪಾಲಂಕೃತ ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಪೊಲೀಸ್ ಸಿಬ್ಬಂದಿ, ಸಾರ್ವಜನಿಕರು ಗೌರವ ಸಲ್ಲಿ ಸಿದರು. ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಹುತಾತ್ಮರಿಗೆ ಗೌರವ ಸಮರ್ಪಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಸುಧಾಕರ ಎಸ್. ನಾಯಕ್, ಕಾರ್ಕಳ ಎಎಸ್ಪಿ ಹರ್ಷ ಪ್ರಿಯಂ ವಧಾ, ಕುಂದಾಪುರ ಡಿವೈಎಸ್‌ಪಿ ಎಚ್. ಡಿ. ಕುಲಕರ್ಣಿ, ಉಡುಪಿ ಡಿವೈಎಸ್‌ಪಿ ಪ್ರಭು ಡಿ.ಟಿ. ಉಪಸ್ಥಿತರಿದ್ದರು.
ಉಡುಪಿಯ ನಮ್ಮ ವರದಿಗಾರ,

ವಿಲ್ಸನ್ ಡಿ’ಸೋಜ