ಕಾರಿನಲ್ಲಿ ಸಾಗಿಸುತ್ತಿದ್ದ 1.50 ಕೋಟಿ ಹಣವನ್ನು ರಾಮದುರ್ಗ ಪೊಲೀಸರು ಜಪ್ತಿ ಮಾಡಿದ್ದಾರೆ. ಕ್ಷೇತ್ರದಲ್ಲಿ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹಾಗು ಚುನಾವಣೆ ಅಧಿಕಾರಿಗಳ ತಂಡ ಖಚಿತ ಮಾಹಿತಿ ಮೇರೆಗೆ ಕಾರಿನಲ್ಲಿ ಸಾಗಿಸುತ್ತಿದ್ದ ಅಕ್ರಮ ಹಣವನ್ನ ವಶಕ್ಕೆ ಪಡೆದಿದ್ದಾರೆ.
ತಾಲೂಕಿನ ತುರನೂರು ಬಳಿ ಬಿಜೆಪಿ ಅಭ್ಯರ್ಥಿ ಬೆಂಬಲಿಗರಿಂದ ಹಣ ಹಂಚುತ್ತಿದಾರೆ ಎನ್ನಲಾದ ದೃಶ್ಯ ಮೊಬೈಲ್‍ನಲ್ಲಿ ಸೆರೆ ಹಿಡಿಯಲಾಗಿತ್ತು.ನಂತರ ಅಧಿಕಾರಿಗಳು ಎಚ್ಚೆತ್ತು ನಗರದ ವಿವಿದೆಢೆ ನಾಕಬಂದಿ ಹೆಚ್ಚಿಸಿದ್ದರು. ಪ್ರಸ್ತುತ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಹಣ ಹಸ್ತಾಂತರ ಮಾಡಲಾಗಿದೆ ಮತ್ತು ತನಿಖೆ ಮುಂದುವರೆದಿದೆ.
