ಉಡುಪಿ: ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮನಾಥ @ ಸೋಮು, ವಯಸ್ಸು: 40 ವರ್ಷ, ತಂದೆ: ಮುದ್ದು, ವಾಸ: ಕುಂಬ್ರಪದವು, ತೆಲ್ಲಾರ್ ರಸ್ತೆ, ಕಸಬಾ ಗ್ರಾಮ, ಕಾರ್ಕಳ ತಾಲ್ಲೂಕು, ಉಡುಪಿ ಜಿಲ್ಲೆ, ಉಡುಪಿ ಜಿಲ್ಲೆಯ ವಿಶೇಷ ಕಾರ್ಯನಿರ್ವಾಹಕ ನ್ಯಾಯಾಧೀಶರು ಮತ್ತು ಪೊಲೀಸ್ ವರಿಷ್ಠಾಧಿಕಾರಿ, ಉಡುಪಿ ಜಿಲ್ಲೆ, ಇವರು ದಿನಾಂಕ 30.04.2026 ರಂದು ಗಡೀಪಾರು ಆದೇಶ ಹೊರಡಿಸಿದ್ದಾರೆ. ಇವರ ವಿರುದ್ಧ 11 ಪ್ರಕರಣಗಳು ದಾಖಲಾಗಿದ್ದು, ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿದೆ. ಶಿವಮೊಗ್ಗ ಜಿಲ್ಲೆಯ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಅವರನ್ನು ಗಡೀಪಾರು ಮಾಡಲಾಗಿದೆ.

ಉಡುಪಿಯ ನಮ್ಮ ವರದಿಗಾರ,

ವಿಲ್ಸನ್ ಡಿ’ಸೋಜ







