ಕುಂದಾಪುರ: ವ್ಯಕ್ತಿಯೊಬ್ಬರು ಕಳೆದುಕೊಂಡಿದ್ದ ಚಿನ್ನದ ಸರ ಸಿಕ್ಕಿದ್ದು ಅದನ್ನು ಸಂಬಂದಪಟ್ಟ ವಾರೀಸುದಾರರಿಗೆ ಹಿಂದಿರುಗಿಸುವ ಮೂಲಕ ಗಂಗೊಳ್ಳಿ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್‌ವೋರ್ವರು ಪ್ರಾಮಾಣಿಕತೆ ಮೆರೆದಿದ್ದಾರೆ.
ಗಂಗೊಳ್ಳಿ ಪೊಲೀಸ್ ಸಿಬ್ಬಂದಿ ಗಂಗಾಧರ್ ಅವರಿಗೆ ಕುಂದಾಪುರ ಎಸ್‌ಬಿಐ ಎಟಿಎಂ ಬಳಿ ಚಿನ್ನದ ಸರ ಸಿಕ್ಕಿದ್ದು ಈ ಬಗ್ಗೆ ಪರಿಶೀಲಿಸಿ ತಕ್ಷಣ ಕಾರ್ಯಪ್ರವೃತ್ತರಾಗಿದ್ದು ವಾರೀಸುದಾರರನ್ನು ಪತ್ತೆ ಹಚ್ಚಿ ಸರವನ್ನು ಗಂಗೊಳ್ಳಿ ಪಿಎಸ್ಐ ಪವನ್ ನಾಯಕ್ ಅವರ ಉಪಸ್ಥಿತಿಯಲ್ಲಿ ಕಳೆದುಕೊಂಡವರಿಗೆ ಹಿಂದಿರುಗಿಸಿದ್ದಾರೆ.
ಪೊಲೀಸ್ ಸಿಬ್ಬಂದಿಯ ಈ ಕಾರ್ಯವನ್ನು ಇಲಾಖೆ ಮೇಲಾಧಿಕಾರಿಗಳು ಪ್ರಶಂಶಿಸಿದ್ದು ಸಾರ್ವಜನಿಕ ವಲಯದಲ್ಲಿ ಪೊಲೀಸ್ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಉಡುಪಿಯ ನಮ್ಮ ವರದಿಗಾರ,

ವಿಲ್ಸನ್ ಡಿ’ಸೋಜ