ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ, ಕಾವೇರಿಪುರದ ಬಳಿ ನಡೆದುಕೊಂಡು ಹೋಗುತ್ತಿರುವಾಗ್ಗೆ, ಇಬ್ಬರು ಅಪರಿಚಿತ ಆಸಾಮಿಗಳು ಬಂದು, ಒನ್ಪ್ಲಸ್ ಕಂಪನಿಯ ಮೊಬೈಲ್ ಫೋನನ್ನು ಕಿತ್ತುಕೊಂಡು ಪರಾರಿಯಾಗಿರುತ್ತಾರೆಂದು ನೀಡಿದ ದೂರಿನ ಅನ್ವಯ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಿಸಿಕೊಂಡು, ಕಾರ್ಯಪ್ರವೃತ್ತರಾದ ಪೊಲೀಸರು 18/07/2023 ರಂದು ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ, ಅವರಿಂದ ಸುಮಾರು ರೂ.1,60,000/-ಬೆಲೆ ಬಾಳುವ ಒಟ್ಟು ೧೪ ಮೊಬೈಲ್ ಪೋನ್ಗಳನ್ನು ವಶಪಡಿಸಿಕೊಂಡಿರುತ್ತಾರೆ.
ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರದ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಲಕ್ಷಣ್ ನಿಂಬರ್ಗಿ ರವರ ಸೂಕ್ತ ಮಾರ್ಗದರ್ಶನದಲ್ಲಿ ವಿಜಯನಗರ ಉಪವಿಭಾಗದ ಸಹಾಯಕ ಪೊಲೀಸ್ ಕಮೀಷನರ್ರವರಾದ ಶ್ರೀ.ಪಿ.ರವಿ ರವರ ನಿರ್ದೇಶನದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ. ಲೋಹಿತ್,ಬಿ.ಎನ್ ರವರ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಮೇಲ್ಕಂಡ ಅಧಿಕಾರಿಗಳ ಮತ್ತು ಸಿಬ್ಬಂದಿಯವರುಗಳ ಕರ್ತವ್ಯವನ್ನು ಬೆಂಗಳೂರು ನಗರದ ಪೊಲೀಸ್
ಆಯುಕ್ತರಾದ ಶ್ರೀ.ಬಿ.ದಯಾನಂದ ಮತ್ತು ಅಪರ ಪೊಲೀಸ್ ಆಯುಕ್ತರು ಪಶ್ಚಿಮ ಶ್ರೀ. ಎನ್.ಸತೀಶ್ ಕುಮಾರ್ ರವರು
ಪ್ರಶಂಸಿರುತ್ತಾರೆ.
ವರದಿ : ಆಂಟೋನಿ ಬೇಗೂರು