ಹೆಬ್ಬಾಳ ಮೇಲು ಸೇತುವೆಗೆ ಎರಡು ಹೊಸ ಟ್ರ್ಯಾಕ್‌ಗಳನ್ನು ಸೇರಿಸಲು ಆರಂಭಿಸಿರುವುದರಿಂದ ಕೆ.ಆರ್.ಪುರ ಲೂಪ್ ಸೇರುವ ಮುಖ್ಯ ಟ್ರ್ಯಾಕ್ ಬಳಿ ಎರಡು ಸ್ಪ್ಯಾಮ್‌ಗಳನ್ನು ಕಿತ್ತು ಹಾಕಲಾಗುವುದು. ಇದರಿಂದ ಕೆ.ಆರ್.ಪುರ ಲೂಪ್‌ನಲ್ಲಿ ಮುಂದಿನ ನಾಲ್ಕು ತಿಂಗಳವರೆಗೆ ನಗರದ ಕಡೆಗೆ ಸಂಚಾರ ನಿಧಾನವಾಗಲಿದೆ. ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಸಂಚಾರ ವಿಭಾಗದಿಂದ ಈ ಕೆಳಕಂಡ ಬದಲಾವಣೆಗಳನ್ನು ಮಾಡಲಾಗಿದೆ.
1 ದಿನಾಂಕ 17-04-2024 ರಿಂದ ನಾಗವಾರ ಕಡೆಯಿಂದ ಹೆಬ್ಬಾಳ ಮೇಲೇತುವೆ ಕಡೆಗೆ ಬರುವ ವಾಹನಗಳ ಪೈಕಿ ದ್ವಿ-ಚಕ್ರ ವಾಹನಗಳನ್ನು ಹೊರತು ಪಡಿಸಿದಂತೆ ಉಳಿದೆಲ್ಲಾ ವಾಹನಗಳಿಗೆ ಕೆ.ಆರ.ಪುರ ಅಪ್-ಲ್ಯಾಂಪ್ ಅನ್ನು ಮುಚ್ಚಲಾಗುತ್ತಿದೆ.
- ನಾಗವಾರ(ಔಟರ್ ರಿಂಗ್ ರಸ್ತೆ) ಕಡೆಯಿಂದ ನಗರದ ಒಳಗೆ ಮೇಟ್ರಿ ಸರ್ಕಲ್ ಮುಖಾಂತರ ಬರುತ್ತಿದ್ದ ವಾಹನಗಳ ಚಾಲಕರು ಹೆಬ್ಬಾಳ ಸರ್ಕಲ್‌ನಲ್ಲಿ ಫೈಓವರ್ ಕೆಳಗಿನಿಂದ ಬಲ ತಿರುವು ಪಡೆದು ಕೊಡಿಗೆಹಳ್ಳಿ ಜಂಕ್ಷನ್ ಬಳಿ ಯೂಟರ್ನ್ ಪಡೆದು ಸರ್ವಿಸ್ ರಸ್ತೆಯಿಂದ ಹೆಬ್ಬಾಳ ಫೈ ಓವರ್‌ನ ರಾಂಪ್ ಮುಖೇನ ನಗರದ ಕಡೆಗೆ ಚಲಿಸಬಹುದಾಗಿರುತ್ತದೆ.
- ಕೆ.ಆರ್.ಪುರ, ನಾಗವಾರಕಡೆಯಿಂದನಗರದಕಡೆಗೆಬರುವವಾಹನಗಳ ಚಾಲಕರುಪರ್ಯಾಯಮಾರ್ಗಗಳಾದ,
- ಐ.ಒ.ಸಿ-ಮುಕುಂದ ಥಿಯೇಟರ್ ರಸ್ತೆ,
- ಲಿಂಗರಾಜಪುರ ಮೇಸ್ಸೇತುವೆ ಮಾರ್ಗ,
- ನಾಗವಾರ ಟ್ಯಾನರಿ ರಸ್ತೆ ಮಾರ್ಗವಾಗಿ ನಗರ ಪ್ರವೇಶಿಸಲು ಕೋರಿದೆ.
4.ಹೆಗಡೆನಗರ-ಥಣಿಸಂದ್ರ ಕಡೆಯಿಂದ ಬರುವ ವಾಹನ ಸವಾರರು/ಚಾಲಕರು ಜಿ.ಕೆ.ವಿ.ಕೆ-ಜಕ್ಕೂರು ರಸ್ತೆ ಮೂಲಕ ನಗರ ಪ್ರವೇಶಿಸಿಸಬಹುದಾಗಿದೆ.
5.ಕೆ.ಆರ್.ಪುರಂ ಕಡೆಯಿಂದ ಹೆಬ್ಬಾಳ ಮಾರ್ಗವಾಗಿ ಯಶವಂತಪುರ ಕಡೆಗೆ ಚಲಿಸುವ ವಾಹನಗಳು ಹೆಬ್ಬಾಳ ಫೈಓವರ್ ಕೆಳಗಡೆ ನೇರವಾಗಿ ಬಿ.ಇ.ಎಲ್ ಸರ್ಕಲ್ ತಲುಪಿ ಎಡತಿರುವು ಪಡೆದು ಸದಾಶಿವ ನಗರ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಐ.ಐ.ಎಸ್.ಸಿ. ಮುಖಾಂತರ ಚಲಿಸಬಹುದಾಗಿದೆ.
6.ಕೆ.ಆರ್.ಪುರಂ, ಹೆಣ್ಣೂರು, ಹೆಚ್.ಆರ್.ಬಿ.ಆರ್.ಲೇಔಟ್, ಕೆ.ಜಿ.ಹಳ್ಳಿ, ಬಾಣಸವಾಡಿ ಕಡೆಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ಹೋಗಬಯಸುವ ವಾಹನಗಳು ಹೆಣ್ಣೂರು-ಬಾಗಲೂರು ರಸ್ತೆಯನ್ನು ಬಳಸಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಲು ಕೋರಿದೆ.
ಸಾರ್ವಜನಿಕರುನಹಕರಿನಲುಕೋರಿದೆ.