ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಸರಬರಾಜು/ಬಳಕೆ/ಮಾರಾಟದ ಬಗ್ಗೆ ನಮ್ಮ ಕಛೇರಿ/ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಮಾದಕ ವಸ್ತುಗಳ ಮಾರಾಟವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ಆರ್.ವಿ.ಗಂಗಾಧರಪ್ಪ, ಡಿಎಸ್‌ಪಿ, ಸೋಮವಾರಪೇಟೆ ಉಪವಿಭಾಗ, ಶ್ರೀ ರಾಜೇಶ್.ಕೆ, ಸಿಪಿಐ, ಕುಶಾಲನಗರ ವೃತ್ತ ಹಾಗೂ ಶ್ರೀ ಮೋಹನ್ ರಾಜು.ಪಿ, ಪಿಎಸ್‌ಐ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿ: 17-03-2024 ರಂದು ಬಸವನಹಳ್ಳಿ ಗ್ರಾಮ ಸಮೀಪ ತೆಪ್ಪದಕಂಡಿ ಎಂಬಲ್ಲಿ ನಿಷೇಧಿತ ಮಾದಕ ವಸ್ತುವನ್ನು ಮಾರಾಟ/ಸರಬರಾಜು ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ದ್ವಿ-ಚಕ್ರ ವಾಹನದಲ್ಲಿ ಸಾಗಿಸುತ್ತಿದ್ದು, ಹಾಗೂ ಆರೋಪಿ ಪಿರಿಯಾಪಟ್ಟಣ ತಾಲ್ಲೂಕು ದೊಡ್ಡಹೊಸೂರು ಗ್ರಾಮ ಮೂಲದ ಬಸವರಾಜು, 37 ವರ್ಷ ಎಂಬುವವರನ್ನು 245 ಗ್ರಾಂ ಗಾಂಜಾ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ಕ್ರಮ ಕೈಗೊಳ್ಳಲಾಗಿದೆ.
ಕೊಡಗು ಜಿಲ್ಲಾ ಪೊಲೀಸ್ ಘಟಕದ ಮಾದಕ ದ್ರವ್ಯ ಪತ್ತೆ ಪರಿಣತಿ ಹೊಂದಿದ “ಕಾಪರ್” ಎಂಬ ಶ್ವಾನವು ಮೇಲ್ಕಂಡ ಆರೋಪಿಯು ಮನೆಯ ಶೌಚಾಲಯದ ಹಿಂಭಾಗದಲ್ಲಿ ಭೂಮಿಯ ಒಳಗೆ ಬಚ್ಚಿಟ್ಟಿದ್ದ ಗಾಂಜಾವನ್ನು ಪತ್ತೆ ಹಚ್ಚುವಲ್ಲಿ ಸಹಕರಿಸಿರುತ್ತದೆ.
ಸದರಿ ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಮತ್ತು ಕಾಪರ್ ಶ್ವಾನ & ಕಾಪರ್ ಶ್ವಾನದ ನಿರ್ವಾಹಕರಾದ ಶ್ರೀ ಮನಮೋಹನ್.ಬಿ.ಪಿ, ಎಹೆಚ್‌ಸಿ-01 ರವರನ್ನು ಶ್ರೀ ಕೆ.ರಾಮರಾಜನ್, ಐಪಿಎಸ್, ಕೊಡಗು ಜಿಲ್ಲೆ, ಮಡಿಕೇರಿ ರವರು ಶ್ಲಾಘಿಸಿರುತ್ತಾರೆ.