ಪ್ರಕೃತಿ ವಿಕೋಪದಿಂದ ಸಂಭವಿಸುವ ಭೂಕುಸಿತ ಹಾಗೂ ಪ್ರವಾಹದ ಸಂದರ್ಭದಲ್ಲಿ ಜನರನ್ನು ರಕ್ಷಣೆ ಮಾಡುವ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಇಂದು ತಲಕಾವೇರಿಯ ಗಜಗಿರಿ ಬೆಟ್ಟದಲ್ಲಿ ಅಣಕು ಪ್ರದರ್ಶನ ನಡೆಯಿತು. ಜಿಲ್ಲಾಡಳಿತ ಮತ್ತು ರಾಜ್ಯ ವಿಪತ್ತು ನಿರ್ವಹಣಾ ವಿಭಾಗದ ವತಿಯಿಂದ ಜಿಲ್ಲಾಧಿಕಾರಿ ಚಾರುಲತ್ ಸೋಮಲ್ ಅವರ ನೇತೃತ್ವದಲ್ಲಿ ಜಿಲ್ಲಾ ವರಿಷ್ಠಾಧಿಕಾರಿ ಶ್ರೀಮತಿ ಕ್ಷಮಾ ಮಿಶ್ರಾ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ ಅವರ ಉಪಸ್ಥಿತಿಯಲ್ಲಿ ಅಣುಕು ಪ್ರದರ್ಶನ ನಡೆಯಿತು.
ಅಣಕು ಪ್ರದರ್ಶನದಲ್ಲಿ ಎನ್.ಡಿ.ಆರ್.ಎಫ್, ಅಗ್ನಿಶಾಮಕ ಇಲಾಖೆ, ಗೃಹ ರಕ್ಷಕ ದಳ, ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆಯ ರಕ್ಷಣಾ ತಂಡಗಳು ಪ್ರಕೃತಿ ವಿಕೋಪ ಸಂಭವಿಸಿದ ಸಂದರ್ಭದಲ್ಲಿ ಹೇಗೆ ರಕ್ಷಣಾ ಕಾರ್ಯ ನಿಭಾಯಿಸಬೇಕು ಎಂಬ ಬಗ್ಗೆ ಅಣುಕು ಪ್ರದರ್ಶನ ನಡೆಸಿದರು.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,