ಮಾದಕ ವಸ್ತುಗಳ ಮಾರಾಟವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಆರ್.ಮೋಹನ್‌ಕುಮಾರ್, ಡಿವೈಎಸ್‌ಪಿ, ವಿರಾಜಪೇಟೆ ಉಪ ವಿಭಾಗ, ಶಿವರುದ್ರ,ಬಿ.ಎಸ್, ಸಿಪಿಐ, ವಿರಾಜಪೇಟೆ ವೃತ್ತ ಹಾಗೂ ಮಂಜುನಾಥ.ಸಿ.ಸಿ, ಪಿಎಸ್‌ಐ & ಎನ್.ಟಿ.ತಮ್ಮಯ್ಯ, ಪಿಎಸ್‌ಐ, ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿ: 28-02-2024 ರಂದು ಅಮ್ಮತ್ತಿಯ ಮುತ್ತಪ್ಪ ದೇವಸ್ಥಾನದ ಕಡೆಗೆ ತೆರಳುವ ರಸ್ತೆಯಲ್ಲಿನ ಬಸ್ ನಿಲ್ದಾಣದ ಬಳಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಕಳತ್ಕಾಡು ಗ್ರಾಮ ಗೊಟ್ಟಡ ಕಾಲೋನಿ ನಿವಾಸಿಯಾದ ಸಚಿನ್.ಪಿ.ಎಸ್, 32 ವರ್ಷ ಎಂಬುವನನ್ನು 70 ಗ್ರಾಂ ಗಾಂಜಾ ನಿಷೇದಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ಕ್ರಮ ಕೈಗೊಳ್ಳಲಾಗಿದೆ.
ಸದರಿ ಪ್ರಕರಣದ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಶ್ಲಾಘಿಸಿಲಾಗಿದೆ
ವಿಶೇಷ ಸೂಚನೆ:- ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಹಾಗೂ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತೇವೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ.