ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಬೆಂಗಳೂರು ನಗರ ಠಾಣೆಗಳಲ್ಲಿ ಮಾಸಿಕ ಸಂಪರ್ಕ ಸಭೆ ನಡೆಸುತ್ತಿದ್ದಾರೆ .ಪ್ರತಿ ತಿಂಗಳ ನಾಲ್ಕನೇ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯುತ್ತದೆ .ಈ ಅವಧಿಯಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆ ಇನ್ಸ್ ಪೆಕ್ಟರ್ ಗಳು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದು .
ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಂದು ಮಾಸಿಕ ಜನಸಂಪರ್ಕ ದಿನವನ್ನು ಆಚರಿಸಲಾಗಿತ್ತು ಕೊತ್ತನೂರು ಪೊಲೀಸ್ ಠಾಣಾಧಿಕಾರಿ ಶ್ರೀ. ಚನ್ನೇಶ್ ಸಬ್ ಇನ್ಸ್ ಪೆಕ್ಟರ್ ಆದ ಶ್ರೀ. ಉಮೇಶ್ ಸಂಚಾರಿ ಎ .ಎಸ್ .ಐ .ಶ್ರೀ. ಪ್ರೇಮ್ ಚಂದ್ ರವರು ಹಾಜರಿದ್ದರು . ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡ ಸಾರ್ವಜನಿಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಕೆಲವು ದೂರುಗಳು ತಕ್ಷಣವೇ ಪರಿಶೀಲಿಸಲಾಯಿತು.ಕಳ್ಳತನ ದರೋಡೆ ಮತ್ತು ನೈಜೀರಿಯನ್ ಗಳು ಡ್ರಗ್ಸ್ ಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಸ್ಥಳೀಯರು ದೂರು ತಿಳಿಸಿದರು .ದೂರುಗಳನ್ನು ಸ್ವೀಕರಿಸಿದ ಸಿಬ್ಬಂದಿಗಳು ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಯಿತು .