ಇಂದು ಕೋಲಾರ ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಜನೆಯೊಂದಿಗೆ ‘ಅಕ್ಕ ಪಡೆ’ ಯೋಜನೆಯ ಚಾಲನಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಅಧಿಕಾರಿಗಳು, ‘ಅಕ್ಕ ಪಡೆ’ ಯೋಜನೆಯು ಪೊಲೀಸ್ ಇಲಾಖೆ ಮತ್ತು ಸಮಾಜದ ನಡುವಿನ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸುವ ಉದ್ದೇಶ ಹೊಂದಿದೆ ಎಂದು ತಿಳಿಸಿದರು.
ಅಲ್ಲದೆ, ಈ ಯೋಜನೆಯ ಮೂಲಕ ಮಹಿಳೆಯರು ಹಾಗೂ ಮಕ್ಕಳ ಭದ್ರತೆ, ರಕ್ಷಣೆ ಮತ್ತು ಸಬಲೀಕರಣಕ್ಕೆ ವಿಶೇಷ ಆದ್ಯತೆ ನೀಡಲಾಗುವುದಾಗಿ ತಿಳಿಸಲಾಯಿತು. ಸಮಾಜದಲ್ಲಿ ಸುರಕ್ಷಿತ ವಾತಾವರಣ ನಿರ್ಮಾಣಕ್ಕೆ ‘ಅಕ್ಕ ಪಡೆ’ ಮಹತ್ವದ ಪಾತ್ರ ವಹಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂಘ







