ಕರ್ನಾಟಕ ಸರ್ಕಾರವು ಭಾನುವಾರ (ಸೆಪ್ಟೆಂಬರ್ 5) ಕೋವಿಡ್ -19 ಸಾಂಕ್ರಾಮಿಕದ ನಡುವೆ ರಾಜ್ಯದಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ವಾರ್ಡ್ಗೆ ಒಂದು ಗಣೇಶ ಮೂರ್ತಿ ಪ್ರತಿಷ್ಠಾಪಿಸುವಾಗ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ನು ಪಾಲಿಸಬೇಕು. ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತುಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರಲು ತೀರ್ಮಾನಿಸಲಾಗಿದೆ.
ಯಾವುದೇ ಕಾರಣಕ್ಕೂ ಗಣೇಶ ಪಟ್ಟಿ ನೀಡಬೇಡಿ ಎಂದು ತಿಲಕ್ ನಗರ ಠಾಣಾಧಿಕಾರಿ ಎಂ. ಎಲ್. ಗಿರೀಶ್ ಅವರು ಹೇಳಿದರು.
ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಬಡವರಿಗೂ ಸೋಂಕು ತಗುಲಿದೆ. ಅಂತಹವರ ಅರೋಗ್ಯದ ಕಾಳಜಿ ವಹಿಸಿ ಅವರಿಗೆ ಮಾಸ್ಕ್, ಸ್ಯಾನಿಟೈಸರ್ ಕೊಡಿ, ಯಾವುದೇ ಕಾರಣಕ್ಕೂ ಗಣೇಶ ಪಟ್ಟಿ ಕೊಡಬೇಡಿ ಎಂದರು.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,