ಜನವರಿ 18ರಿಂದ ಫೆಬ್ರವರಿ 17ರವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಆಚರಿಸಲಾಗುತ್ತಿದ್ದು, ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಅತಿ ಹೆಚ್ಚು ಪ್ರಕರಣಗಳನ್ನು ದಾಖಲಿಸುವಂತೆ ಸಂಚಾರ ಪೊಲೀಸರಿಗೆ ಉನ್ನತ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಗದಗ ಸಂಚಾರ ಠಾಣಾ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಪ್ರಮುಖ ರಸ್ತೆಗಳಲ್ಲಿ ಜಾತಾ ಮೂಲಕ ತಿಳುವಳಿಕೆ ಅಭಿಯಾನವನ್ನು ನಡೆಸಿದ್ದು, ಈ ಕಾಲಕ್ಕೆ ವಾಹನಗಳಿಗೆ ರಿಫ್ಲೆಕ್ಟರ್ ಅಳವಡಿಸುವ ಮೂಲಕ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ತಿಳುವಳಿಕೆ ನೀಡಿದ್ದು ಇರುತ್ತದೆ.30 ದಿನಗಳ ಸುರಕ್ಷತಾ ಮಾಸದಲ್ಲಿ ನಗರದ ಪ್ರತಿ ಜಂಕ್ಷನ್‌ನಲ್ಲಿ ಹೆಚ್ಚಿನ ಸಂಖ್ಯೆಯ ಸಂಚಾರ ಪೊಲೀಸರನ್ನು ಕಾಣಬಹುದಾಗಿದೆ. ಹೆಲ್ಮೆಟ್ ಧರಿಸದೆ ವಾಹನ ಚಾಲನೆ, ಅತಿ ವೇಗದ ಚಾಲನೆ, ಫುಟ್‌ಪಾತ್ ಮೇಲೆ ವಾಹನ ಚಾಲನೆ, ಒನ್‌ವೇನಲ್ಲಿ ಸಂಚಾರ ಸೇರಿದಂತೆ 15 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಕುರಿತು ಪೊಲೀಸರು ಗಮನಹರಿಸಲಿದ್ದಾರೆ. ಅಲ್ಲದೇ ಅಪಘಾತ ಪ್ರಕರಣಗಳ ಸಂಖ್ಯೆ ತಗ್ಗಿಸುವ ನಿಟ್ಟಿನಲ್ಲಿ ಸಂಚಾರ ಪೊಲೀಸರು ಹಲವಾರು ಜಾಗೃತಿ ಜಾಥಾಗಳನ್ನು ನಡೆಸುತ್ತಿದ್ದಾರೆ.
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ. ಲಕ್ಷ್ಮೇಶ್ವರ ಠಾಣಾ ವ್ಯಾಪ್ತಿಯಲ್ಲಿ ರೈತರ ಟ್ರ್ಯಾಕ್ಟರ್ಗಳಿಗೆ ರಿಫ್ಲೆಕ್ಟರ ಅಳವಡಿಸುವ ಅಭಿಯಾನವನ್ನು ನಡೆಸಿದ್ದು ಡಿಎಲ್, ವಾಹನ ಹಾಗೂ ಕೃಷಿ ಕಾರ್ಯಗಳಿಗೆ ಮಾತ್ರ ಟ್ರ್ಯಾಕ್ಟರ್ ಬಳಸುವ ಬಗ್ಗೆ & ಸಂಚಾರ ನಿಯಮ ಪಾಲನೆ ತಿಳುವಳಿಕೆ ನೀಡಿದ್ದು ಇರುತ್ತದೆ.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,