ಸಿಟಿ ಮಾರ್ಕೆಟ್ ಪೊಲೀಸ್ ಠಾಣಾ ಸರಹದ್ದಿನ ಬಾಲಾಜಿ ಹೊಸೈರಿ, ಅಂಗಡಿಗೆ ದಿನಾಂಕ:-
21/06/2023 ರಂದು ಇಬ್ಬರು ವ್ಯಕ್ತಿಗಳು ವ್ಯಾಪಾರ ಮಾಡುವವರಂತೆ ಅಂಗಡಿಗೆ ಬಂದು ಚಾಕುವನ್ನು ತೋರಿಸಿ, ಬೆದರಿಕೆ ಹಾಕಿ ಪಿರಾದುದಾರರ ಬಳಿ ಇದ್ದ ನಗದು ಹಣವನ್ನು ಕಿತ್ತುಕೊಂಡು ಓಡಿ ಹೋಗಿರುತ್ತಾರೆ. ಈ ಬಗ್ಗೆ ಪ್ರಕರಣ ದಾಖಲಾಗಿ ತನಿಖೆಯನ್ನು ಕೈಗೊಂಡಿರುತ್ತೆ.
ತನಿಖಾ ಕಾಲದಲ್ಲಿ ತನಿಖಾಧಿಕಾರಿಗಳು ಮತ್ತು ಸಿಬ್ಬಂದಿಗಳು ಕ್ಷಿಪ್ರಾ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಾದ ದಿನದೊಂದೇ ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿರುತ್ತಾರೆ. ಆರೋಪಿಯಿಂದ ಒಂದು ಚಾಕುವನ್ನು ಹಾಗೂ ಮಾರ್ಕೆಟ್ ಪೊಲೀಸ್ ಠಾಣೆ ಮತ್ತು ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ 04 ದ್ವಿಚಕ್ರ ವಾಹನಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತೇ. ಇದರ ಮೌಲ್ಯ 1.40.000 ರೂ.
ಈ ಯಶಸ್ವಿ ಕಾರ್ಯಾಚರಣೆಯನ್ನು ಪಶ್ಚಿಮ ವಿಭಾಗದ ಉಪ ಪೊಲೀಸ್ ಕಮೀಷನರ್ ರವರಾದ ಡಾ:ಲಕ್ಷ್ಮಣ ನಿಂಬರಗಿ, ರವರ ಸೂಕ್ತ ಮಾರ್ಗದರ್ಶನದಲ್ಲಿ, ಚಿಕ್ಕಪೇಟೆ ಉಪ-ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಶ್ರೀ.ಕೆ.ಸಿ.ಗಿರಿ ರವರ ನಿರ್ದೇಶನದಲ್ಲಿ, ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ಎಂ.ಶಿವಕುಮಾರ್ ರವರ ನೇತೃತ್ವದ ತಂಡವು ಸದರಿ ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಮೇಲ್ಕಂಡ ಅಧಿಕಾರಿಗಳ ಮತ್ತು ಸಿಬ್ಬಂದಿಯವರುಗಳ ಕರ್ತವ್ಯವನ್ನು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಮತ್ತು ಅಪರ ಪೊಲೀಸ್ ಆಯುಕ್ತರು ಪಶ್ಚಿಮ ಸತೀಶ್ ಕುಮಾರ್ ರವರು ಪ್ರಶಂಸಿರುತ್ತಾರೆ.