ವಿದ್ಯಾರ್ಥಿ ದೆಸೆಯಿಂದಲೇ ನವ ನಾಗರೀಕ ಸಮಾಜದ ಸುಧಾರಣೆಗಾಗಿ ನಾಯಕತ್ವ, ನಾಗರಿಕ ಜ್ಞಾನ, ಕಾನೂನು, ಸ್ವಯಂ ಶಿಸ್ತು, ನೈತಿಕತೆ, ಮೌಲ್ಯಗಳು ಹಾಗೂ ಸಾಮಾಜಿಕ ದುಷ್ಪರಿಣಾಮಗಳ ಸಕಾರಾತ್ಮಕ ಆಲೋಚನೆಗಳ ಬಗ್ಗೆ ಹಾಗೂ ಉತ್ತಮ ಸಮಾಜದ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿಸಲು ಸಮುದಾಯ ಪೊಲೀಸ್ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, 05 ವಾರಗಳು ಮುಕ್ತಾಯವಾಗಿರುತ್ತವೆ. ಈ ದಿನ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿರುತ್ತಾರೆ.ಮುಂದಿನ ವಾರದಿಂದ 51 ಸರ್ಕಾರಿ ಪ್ರೌಢಶಾಲೆಗಳಲ್ಲಿ ಸಮುದಾಯ ಪೊಲೀಸ್ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.