ದಿನಾಂಕ:05.09.2021 ರಂದು ಸರ್ವಪಲ್ಲಿ ರಾಧಕೃಷ್ಣನ್ ರವರ ಜನ್ಮದಿನೋತ್ಸವ ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ತ.ರಾ.ಸು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಮಾನ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕುಮಾರಿ. ನಂದಿನಿದೇವಿ, ಐ.ಎ.ಎಸ್ ರವರು ಉದ್ಘಾಟನೆ ಮಾಡಿರುತ್ತಾರೆ, ಮಾನ್ಯ ಪೊಲೀಸ್ ಅಧೀಕ್ಷಕರಾದ ರಾಧಿಕಾ.ಜಿ ಐ.ಪಿ.ಎಸ್ ರವರು ಅಧ್ಯಕ್ಷತೆಯನ್ನು ವಹಿಸಿಕೊಂಡಿರುತ್ತಾರೆ. ಸದರಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಶಿಕ್ಷಣಾಧಿಕಾರಿಗಳು, ಶಿಕ್ಷಕರು ಭಾಗವಹಿಸಿರುತ್ತಾರೆ.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
