ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಚಿತ್ರದುರ್ಗ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಚಿತ್ರದುರ್ಗ.೧೫ ರಾಜ್ಯ ಬಾಲಭವನ ಸೊಸೈಟಿ ,ಜಿಲ್ಲಾ ಪಂಚಾಯತ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ೫ರಿಂದ ೧೬ವರ್ಷದ ಒಳಗಿನ ಮಕ್ಕಳಿಗೆ ಜಿಲ್ಲಾ ಬಾಲ ಭವನ ದಲ್ಲಿ ಹಮ್ಮಿಕೊಂಡಿರುವ ಬೇಸಿಗೆ ಶಿಬಿರ ಕಾರ್ಯಕ್ರಮದ ಅಂಗವಾಗಿ ಪೊಲೀಸ್ ಠಾಣೆ ವೀಕ್ಷಣೆ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ.18/5/2023 ರಂದು ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಳ್ಳಲಾಗಿತ್ತು .

ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಾದ ಕುಮಾರಸ್ವಾಮಿಯವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪರೀಕ್ಷಣಾಧಿಕಾರಿಗಳಾದ ಈ ಮಾರುತಿ, ಜಿಲ್ಲಾ ಬಾಲ ಭವನದ ಕಾರ್ಯಕ್ರಮಸಂಯೋಜಕರಾದ ಡಿ,ಶ್ರೀಕುಮಾರ, ನಗರ ಠಾಣೆಯ ಸಿಪಿಐ ಸಂತೋಷ್ ಕುಮಾರ್, ಬೆರಳಚ್ಚು ವಿಭಾಗದ ಆರಕ್ಷಕ ಉಪ ನಿರೀಕ್ಷಕರಾದ ವಿಶ್ವನಾಥ್, ಬಡಾವಣೆಯ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಉಪಸ್ಥಿತರಿದ್ದರು.