ಕೃಷಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ . ಕೇಂದ್ರ ಸರ್ಕಾರದ ಕೃಷಿ ನೀತಿಗಳ ವಿರುದ್ಧ ಧ್ವನಿ ಎತ್ತಿರುವ ಕಾಂಗ್ರೆಸ್ ಇಂದು ರಾಜಭವನ ಚಲೋ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿದೆ.
ರೈತರ ಹೋರಾಟವನ್ನು ಬೆಂಬಲಿಸಿ ಇಂದು ಮಡಿವಾಳದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು .ಮಡಿವಾಳ ಪೊಲೀಸರು ಅನೇಕ ಟ್ರ್ಯಾಕ್ಟರ್ ಗಳನ್ನು ತಡೆದು ಹೋರಾಟ ಕೈಬಿಡುವಂತೆ ಮನವಿ ಮಾಡಿದರು ,ಅನಂತರ ಟ್ರ್ಯಾಕ್ಟರ್ ಗಳನ್ನು ಅಲ್ಲೇ ಬಿಟ್ಟು ಕಾರ್ಯಕರ್ತರು ತನ್ನ ವಾಹನಗಳಲ್ಲಿ ಚಲಾಯಿಸಿದರು .

ಪ್ರತಿಭಟನಾ ರ್ಯಾಲಿ ಆರಂಭವಾಗುತ್ತಿದ್ದಂತೆ ಕೆಲ ರಸ್ತೆಗಳಲ್ಲಿ ಸಂಚಾರ ಬಂದ್ ಆಗಲಿದೆ. ಕೆಎಸ್ಆರ್ ರೈಲ್ವೆ ನಿಲ್ದಾಣದಿಂದ ಇಂದು ರ್ಯಾಲಿ ಆರಂಭವಾಗುತ್ತಿದ್ದಂತೆ ಶೇಷಾದ್ರಿ ರೋಡ್ ಬಂದ್ ಆಗಲಿದೆ. ಟ್ರಾಫಿಕ್ ನಿಯಂತ್ರಣಕ್ಕೆ 220 ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿದೆ
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
