ದಿನಾಂಕ 09.04.2021ರಂದು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದ ಸೇಂಟ್ ಜೋಸೆಫ್ ಶಾಲಾ ವಿದ್ಯಾರ್ಥಿಗಳಿಗೆ ಹೆಲ್ಮೆಟ್ ಬಳಕೆಯ ಬಗ್ಗೆ ಆಗುವ ಪ್ರಯೋಜನಗಳು, 18 ವರ್ಷದೊಳಗಿನವರು ವಾಹನ ಚಾಲನೆ ಮಾಡದಿರುವ ಬಗ್ಗೆ ಮತ್ತು ಯಾವುದೇ ತುರ್ತು ಸಂದರ್ಭಗಳಲ್ಲಿ ಡಯಲ್-112 ಗೆ ಕರೆ ಮಾಡಿ ಪ್ರಯೋಜನ ಪಡೆದುಕೊಳ್ಳುವ ಕುರಿತು ಹಾಗೂ ಮಾಸ್ಕ್ ಧರಿಸುವುದು,ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ಕೊವೀಡ್-19 ಹೆಚ್ಚಾಗುತ್ತಿರುವುದರಿಂದ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮತ್ತು ಕೊವೀಡ್ ಲಸಿಕೆಯ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡಿ ಮುಂದಿನ ದಿನಗಳಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ರಾಧಿಕಾ ಜಿ ಐಪಿಎಸ್., ರವರು ಶುಭಕೋರಿರುತ್ತಾರೆ.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್