ತಾಳಿಕೋಟೆ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಬಕ್ರೀದ್ ಹಬ್ಬದ ನಿಮಿತ್ತ ಪೊಲೀಸ್ ಇಲಾಖೆಯಿಂದ ಪಟ್ಟಣದ ಪ್ರಮುಖ ವ್ಯಾಪಾರಸ್ಥರು, ಮುಖಂಡರುಗಳು, ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮುಖಂಡರೊಂದಿಗೆ ಸೇರಿ ಶಾಂತಿ ಸಭೆಯಲ್ಲಿ ಬಕ್ರೀದ್ ಹಬ್ಬದ ಆಚರಣೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು PSI ವಿನೋದ ದೊಡಮನಿ ಮತ್ತು CPI ಆನಂದ ವಾಗ್ಮೋಡೆ ಅವರು ತಿಳಿಸಿದರು.ಜುಲೈ 21ರಂದು ನಡೆಯುವ ಬಕ್ರೀದ್ ಹಬ್ಬದ ನಿಮಿತ್ತ ಪೊಲೀಸ್ ಇಲಾಖೆಯಿಂದ ನಡೆಸಿರುವ ಶಾಂತಿ ಸಭೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಬಕ್ರೀದ್ ಹಬ್ಬದ ಆಚರಣೆಯನ್ನು ಹೆಚ್ಚು ಜನರು ಮಸೀದಿಗಳಲ್ಲಿ ಸೇರದೆ ಬ್ಯಾಚಗಳನ್ನು ಮಾಡಿ ಒಂದು ಬ್ಯಾಚಗೆ 50 ಜನರಂತೆ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್, ನಮಾಜ್ ನಿರ್ವಹಿಸುವವರ ಮಧ್ಯ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳುವುದು, ಹಾಗೂ ಇನ್ನಿತರ ಚಟುವಟಿಕೆಗಳು ಬಕ್ರೀದ್ ಹಬ್ಬದ ಸಮಯದಲ್ಲಿ ನಡೆಯದಂತೆ ಎಚ್ಚರಿಕೆ ವಹಿಸಿ ಹಬ್ಬವನ್ನು ಆಚರಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳಾದ CPI ಆನಂದ ವಾಗ್ಮೋಡೆ, PSI ವಿನೋದ ದೊಡಮನಿ, ಪೊಲೀಸ್ ಇಲಾಖೆಯ ಸಿಬ್ಬಂದಿಗಳು, ಪುರಸಭೆಯ ಸದಸ್ಯರು, ಪಟ್ಟಣದ ಪ್ರಮುಖರು ಉಪಸ್ಥಿತರಿದ್ದರು..
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್