ದ.ಕ.ಜಿಲ್ಲೆಯ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಮೇನಾಡು ಎಂಬಲ್ಲಿ ದಿನಾಂಕ; 11-01-2024 ರಂದು ಮುಂಜಾನೆ ನಡೆದ ಚಿನ್ನಾಭರಣಗಳನ್ನು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ:03/2024 ಕಲಂ: 395, 397, 411 ಭಾ.ದಂ.ಸಂ. ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ, ಆರೋಪಿಗಳ ಪತ್ತೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡವು, ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26), ದಿನೇಶ್ ನಾಯ್ಕ (22), ಸಾಗರ ಶೆಟ್ಟಿ (21) ಮಂಗಳೂರು, ಐಕಳ ಗ್ರಾಮದ ರಾಕೇಶ್ ಎಲ್. ಪಿಂಟೋ (29), ಕಡಬ ಬೆಳಂದೂರು ಗ್ರಾಮದ ಎಂ.ಸೀತಾರಾಮ @ ಪ್ರವೀಣ್ (36), ಸುಧೀರ್ (29) ಹಾಗೂ ದರೋಡೆಗೈದ ಚಿನ್ನಾಭರಣವನ್ನು ಸ್ವೀಕರಿಸಿದ ಮೂಲತ: ಬಂಟ್ವಾಳ ತಾಲೂಕಿನ, ಇರಾ ಗ್ರಾಮದವನಾದ ಪ್ರಸ್ತುತ ಗೌರಿ ಕಾಲುವೆ, ಚಿಕ್ಕಮಗಳೂರು ಜಿಲ್ಲೆ ವಾಸಿ ಮಹಮ್ಮದ್ ಹನೀಫ್ (49) ಎಬವರುಗಳನ್ನು ವಶಕ್ಕೆ ಪಡೆದು, ಆರೋಪಿಗಳಿಂದ ರೂ.3,15,000 ಮೌಲ್ಯದ ಚಿನ್ನಾಭರಣ ಹಾಗು ದರೋಡೆಗೆ ಬಳಸಿದ ಅಂದಾಜು ರೂ. 8 ಲಕ್ಷ ಮೌಲ್ಯದ ಇನ್ನೋವಾ ಕಾರು ಹಾಗು ಅಂದಾಜು ರೂ. 2 ಲಕ್ಷ ಮೌಲ್ಯದ ಟಾಟಾ ಇಂಡಿಕಾ ಕಾರು ಸ್ವಾಧೀನಪಡಿಸಿರುತ್ತಾರೆ.
ಸದ್ರಿ ಪ್ರಕರಣದ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಸಿ ಬಿ ರಿಷ್ಯಂತ್, ಐಪಿಎಸ್ ರವರು, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಶ್ರೀ ಧರ್ಮಪ್ಪ, ಮತ್ತು ಶ್ರೀ ರಾಜೇಂದ್ರ, ರವರುಗಳ ಮುಂದಾಳತ್ವದಲ್ಲಿ, ಶ್ರೀ. ಎಸ್. ವಿಜಯಪ್ರಸಾದ್, ಡಿ.ವೈ.ಎಸ್.ಪಿ. ಬಂಟ್ವಾಳ ರವರ ನೇತೃತ್ವದ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ಶಿವಕುಮಾರ ಬಿ, ಶ್ರೀ ನಂದಕುಮಾರ್, ಪಿ.ಎಸ್.ಐ. ಪುಂಜಾಲಕಟ್ಟೆ, ಶ್ರೀ ಹರೀಶ ಎಂ.ಆರ್. ಪಿ.ಎಸ್. ಐ. ಬಂಟ್ವಾಳ ಗ್ರಾಮಾಂತರ ಠಾಣೆರವರ 3 ವಿಶೇಷ ಪತ್ತೆ ತಂಡಗಳನ್ನು ರಚಿಸಿರುತ್ತಾರೆ. ಸದ್ರಿ ತನಿಖಾ ತಂಡದಲ್ಲಿ ಎ.ಎಸ್.ಐ. ಗಿರೀಶ್, ಹೆಚ್.ಸಿ. ಗಳಾದ ಸುಜು, ರಾಧಾಕೃಷ್ಣ, ಉದಯ ರೈ, ಅದ್ರಾಮ, ಪ್ರವೀಣ್ ರೈ, ಪ್ರವೀಣ್, ಸಂದೀಪ್, ರಾಹುಲ್, ಇರ್ಷಾದ್, ರಾಜೇಶ್, ಹರಿಶ್ಚಂದ್ರ, ಪಿ.ಸಿ.ಗಳಾದ ಪುನೀತ್, ರಮ್ಜಾನ್, ಯೊಗೇಶ್ ಡಿ.ಎಲ್, ಕುಮಾರ್ ಹೆಚ್. ಕೆ., ವಿನಾಯಕ ಬಾರ್ಕಿ, ಜಗದೀಶ ಅತ್ತಾಜೆ, ಜಮೀರ್ ಕಲಾರಿ, ಎ.ಹೆಚ್.ಸಿ.ಗಳಾದ ಕುಮಾರ್, ಮಹಾಂತೇಶ್, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್, ಸಂಪತ್ ರವರುಗಳು ಕಾರ್ಯನಿರ್ವಹಿಸಿರುತ್ತಾರೆ.
ಸದ್ರಿ ಆರೋಪಿಗಳ ಪೈಕಿ ಗಣೇಶ ನಾಯ್ಕ ಎಂಬಾತನು 2023ನೇ ಸಾಲಿನಲ್ಲಿ ಮಂಗಳೂರು ನಗರ ವ್ಯಾಪ್ತಿಯ ಮುಲ್ಕಿಯಲ್ಲಿ ಐಕಳ ಹರೀಶ್ ಶೆಟ್ಟಿ ಎಂಬವರ ಮನೆಯಿಂದ ಅಪಾರ ಮೊತ್ತದ ನಗದು, ಚಿನ್ನಾಭರಣ, ವಜ್ರ ಕಳವು ಮಾಡಿದ ಮುಖ್ಯ ಆರೋಪಿಯಾಗಿದ್ದು, ಉಳಿದಂತೆ ಸೀತಾರಾಮ @ ಪ್ರವೀಣ್, ಸುಧೀರ್ ಹಾಗು ಮಹಮ್ಮದ್ ಹನೀಫ್ ರವರ ವಿರುದ್ದ ದ.ಕ.ಜಿಲ್ಲೆ ಹಾಗು ಇನ್ನಿತರ ಜಿಲ್ಲೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿರುವ ಬಗ್ಗೆ ತನಿಖೆಯಿಂದ ತಿಳಿದು ಬಂದಿರುತ್ತದೆ.