ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ದಲಿತರ ಸಭೆ ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ .ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ದಲಿತರ ದಿನದ ಹೆಸರಿನಲ್ಲಿ ಪ್ರತಿ ಠಾಣೆಗಳಲ್ಲಿ ಪರಾಮರ್ಶೆ ಸಭೆ ನಡೆಸಿ, ಇಲಾಖಾ ಮಟ್ಟದಲ್ಲಿಯೇ ಪರಿಹಾರ ಕಾಣುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸೂಚಿಸಿದ್ದಾರೆ.

ಬೆಂಗಳೂರು ನಗರ ಮಡಿವಾಳ ಪೋಲಿಸ್ ಠಾಣೆಯಲ್ಲಿ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ದಲಿತರ ಕುಂದುಕೊರತೆ ಸಭೆ ನಡೆಯಿತು ಪೊಲೀಸ್ ಇನ್ಸ್ ಪೆಕ್ಟರ್ ಸುನೀಲ್ ವೈ ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಸಮಸ್ಯೆ ತೊಂದರೆಗಳಾದಲ್ಲಿ ಕೂಡಲೇ ಪೋಲಿಸ್ ಠಾಣೆಗೆ ತಿಳಿಸುವಂತೆ ಹೇಳಿದರು . ಸಭೆಯಲ್ಲಿ ಪ್ರಸ್ತಾಪ ಕೊಂಡ ಇತರೆ ಇಲಾಖೆಗಳ ಸಮಸ್ಯೆಗಳ ಬಗ್ಗೆ ಆಯಾ ಇಲಾಖೆಗೆ ವರದಿ ನೀಡಿ ಕ್ರಮ ಕೈಗೊಳ್ಳುವಂತೆ ತಿಳಿಸಲಾಗುವುದು ಎಂದು ಭರವಸೆ ನೀಡಿದರು .
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
