ದಾವಣಗೆರೆ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ನೇಮಕಗೊಂಡಿರುವ ಶ್ರೀ ಶೇಖರ್ ಹೆಚ್ ಟಿ, ಐಪಿಎಸ್ ರವರು ಇಂದು ಅಧಿಕೃತವಾಗಿ ತಮ್ಮ ಹುದ್ದೆಯನ್ನು ಸ್ವೀಕರಿಸಿದರು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಹಾಗೂ ಗಂಭೀರ ಸಮಾರಂಭದಲ್ಲಿ ನಿಕಟಪೂರ್ವ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್, ಐಪಿಎಸ್ ರವರಿಂದ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನೆರವೇರಿತು.
ಈ ಸಂದರ್ಭದಲ್ಲಿ ಇಬ್ಬರು ಅಧಿಕಾರಿಗಳು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು, ಇಲಾಖೆಯ ಕಾರ್ಯಚಟುವಟಿಕೆಗಳು ಹಾಗೂ ಪ್ರಗತಿ ಕುರಿತು ಸಂಕ್ಷಿಪ್ತವಾಗಿ ಚರ್ಚಿಸಿದರು. ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು, ಸಾರ್ವಜನಿಕರೊಂದಿಗೆ ಸಮನ್ವಯ ಸಾಧಿಸಿ ಪೊಲೀಸ್ ಸೇವೆಯನ್ನು ಪರಿಣಾಮಕಾರಿಯಾಗಿ ಮುಂದುವರಿಸುವುದಾಗಿ ನೂತನ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಹಿಂದಿನ ಅವಧಿಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಹಲವು ಮಹತ್ವದ ಕಾರ್ಯಗಳನ್ನು ಯಶಸ್ವಿಯಾಗಿ ನೆರವೇರಿಸಿದ ಶ್ರೀಮತಿ ಉಮಾ ಪ್ರಶಾಂತ್ ಅವರಿಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೃತಜ್ಞತೆ ಸಲ್ಲಿಸಿದರು. ಅದೇ ವೇಳೆ, ನೂತನ ಅಧೀಕ್ಷಕರಾದ ಶ್ರೀ ಶೇಖರ್ ಹೆಚ್ ಟಿ ಅವರಿಗೆ ಅಧಿಕಾರಿಗಳು ಹಾರೈಸಿ, ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಶಾಂತಿ ಮತ್ತು ಭದ್ರತೆ ಮತ್ತಷ್ಟು ಬಲವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







