ಪೊಲೀಸ್ ಅಧೀಕ್ಷಕರವರಾದ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರಿಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ವತಿಯಿಂದ ಗುತ್ತಿಗೆ ಸಹಾಯಕ ಸರ್ಕಾರಿ ಅಭಿಯೋಜಕರುಗಳಿಗೆ ಜಿಲ್ಲಾ ಪೊಲೀಸ್ ಕಛೇರಿಯ ಪೊಲೀಸ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಾಗಾರವನ್ನು ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ , ಗೌರವಾನ್ವಿತ ಜಿಲ್ಲಾ ನ್ಯಾಯಾಧೀಶರು ಮತ್ತು ಸತ್ರ ನ್ಯಾಯಾಲಯ , ದಾವಣಗೆರೆ ರವರು ಉದ್ಘಾಟಿಸಿದರು. ಶ್ರೀಮತಿ ಕೆ.ಜಿ ಕಲ್ಪನಾ , ಕಾನೂನು ಅಧಿಕಾರಿಗಳು, ದಾವಣಗೆರೆ ವಲಯ ರವರು ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಅಭಿಯೋಜಕರುಗಳಾದ ಶ್ರೀ ಬಿ.ಎಸ್ ಪಾಟೀಲ್, ಶ್ರೀ ಕೆ. ಕೆಂಚಪ್ಪ ಹಾಗೂ ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.